ಅಜ್ಜಂಪುರ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ, ಮಲೆಬೆನ್ನೂರು ಮೂಲದ ಮಾಲತೇಶ ಜೋಶಿ (54) ಅವರನ್ನು ದುಷ್ಕರ್ಮಿಗಳು ಕೊಲೆಮಾಡಿದ್ದು, ಅವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ನಡೆಸಿರಬಹುದೆಂದು ಅಂದಾಜಿಸಲಾಗಿದೆ.
ಪಟ್ಟಣದ ಶೆಟ್ರು ಸಿದ್ದಪ್ಪ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಅಂಧರಾಗಿದ್ದ ಅವರು, 13 ವರ್ಷಗಳಿಂದ ಸಂಗೀತ ಶಿಕ್ಷಕರಾಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಡಿವೈಸ್ಪಿ ನಾಗರಾಜ್, ಪೊಲೀಸ್ ಇನ್‌ಸ್ಪೆಕ್ಟರ್ ಗಿರೀಶ್ ಭೇಟಿ ನೀಡಿ, ಪರಿಶೀಲಿಸಿದರು. ಮಾಹಿತಿ ಸಂಗ್ರಹಿಸಿರುವ ಪೊಲೀಸರು, ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೊಲೀಸರು, ಕುಟುಂಬದವರಿಗೆ ಶವ ಹಸ್ತಾಂತರಿಸಿದರು. ಮೃತರಿಗೆ ಪತ್ನಿ, ಮಗ ಇದ್ದು, ಶಿವಮೊಗ್ಗದಲ್ಲಿ ವಾಸವಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.