ತರೀಕೆರೆ: ಜೀತ ಕಾರ್ಮಿಕ ಪದ್ಧತಿ (ರದ್ದತಿ) ಕಾಯ್ದೆ 1976ರ ಪ್ರಕಾರ ಬಲವಂತವಾಗಿ ದುಡಿಸಿಕೊಳ್ಳುವುದು ಕಾನೂನು ಬಾಹಿರವಾಗಿದ್ದು, ದುರ್ಬಲ ವರ್ಗಗಳ ಆರ್ಥಿಕ ಹಾಗೂ ದೈಹಿಕ ಶೋಷಣೆಗೆ ಕಾರಣವಾದರೆ ಅದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ವಿಕಸನ ಸಂಸ್ಥೆಯ ಅಧ್ಯಕ್ಷ ಎ.ಎಂ. ವರ್ಗೀಸ್ ಕ್ಲೀಟಸ್ ಹೇಳಿದರು.

ಪಟ್ಟಣದ ವಿಕಸನ ಸಂಸ್ಥೆಯ ಕಚೇರಿ ಯಲ್ಲಿ ಆಯೋಜಿಸಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೀತ ಪದ್ಧತಿಯಿಂದ ಬಿಡುಗಡೆ ಹೊಂದಿದ ಕಾರ್ಮಿಕರ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಕಸನ ಸಂಸ್ಥೆ 37 ವರ್ಷಗಳಿಂದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಕಳೆದ ದಶಕದಿಂದ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಜೀತ ಕಾರ್ಮಿಕರನ್ನು ಗುರುತಿಸಿ, ಅವರನ್ನು ಬಿಡುಗಡೆಗೊಳಿಸಿ ಪುನರ್ವಸತಿ ಕಲ್ಪಿಸುವ ಕೆಲಸ ಮಾಡುತ್ತಿದೆ. ಜಿಲ್ಲಾ ಮಟ್ಟದಲ್ಲಿ ಜೀತ ವಿಮುಕ್ತರ ಒಕ್ಕೂಟ ರಚನೆಗೆ ಪೂರ್ವಭಾವಿ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಬೆಂಗಳೂರಿನ ಐಜೆಎಂ ಸಂಸ್ಥೆಯ ಯೇಸುಪಾಥಮ್, ಜೀತ ಕಾರ್ಮಿಕರ ಪುನರ್ವಸತಿ ಹಾಗೂ ಅಭಿವೃದ್ಧಿಯ ವಿವಿಧ ಆಯಾಮಗಳ ಬಗ್ಗೆ ವಿವರಿಸಿದರು. ‘ಜೀತ ಪದ್ಧತಿ ಒಂದು ಸಾಮಾಜಿಕ ಪಿಡುಗಾಗಿದ್ದು, ಅದರ ನಿರ್ಮೂಲನೆಗೆ ಪ್ರಯತ್ನ ಅಗತ್ಯ’ ಎಂದರು.

ಐಜೆಎಂ ಸಂಸ್ಥೆಯ ಜೇಸುದಾಸ್ ಮಾತನಾಡಿ, ಫೆಬ್ರುವರಿ 9ರಂದು ಜೀತ ಪದ್ಧತಿ ನಿರ್ಮೂಲನಾ ದಿನ ಆಚರಿಸಲಾಗುತ್ತದೆ. ಜೀತದಿಂದ ಬಿಡುಗಡೆಗೊಂಡ ಕಾರ್ಮಿಕರಿಗೆ ಸರ್ಕಾರದಿಂದ ಪ್ರಾರಂಭಿಕ ನೆರವಿಗಾಗಿ ₹30 ಸಾವಿರ ಹಾಗೂ ಪಿಂಚಣಿಯಾಗಿ ₹2 ಸಾವಿರ ನೀಡಲಾಗುತ್ತದೆ. ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿ ಜವಾಬ್ದಾರಿ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ನಿರ್ವಹಿಸಲಾಗುತ್ತದೆ’ ಎಂದು ವಿವರಿಸಿದರು.

ಉದಯೋನ್ಮುಖ ಒಕ್ಕೂಟದ ಕಾರ್ಯದರ್ಶಿ ಮೂರ್ತಿ ತಮ್ಮ ಅನುಭವ ಹಂಚಿಕೊಂಡು, ತರಬೇತಿಗಳಿಂದ ಜೀವನದಲ್ಲಿ ಬದಲಾವಣೆ ಕಂಡಿದ್ದೇನೆ ಎಂದು ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೀತ ಪದ್ಧತಿ ನಿರ್ಮೂಲನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಭಾ ವರ್ಗೀಸ್ ಮಾತನಾಡಿದರು. ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಬಂದ 20 ಮಂದಿ ಜೀತ ವಿಮುಕ್ತರು ಹಾಗೂ ಇತರರು ಭಾಗವಹಿಸಿದ್ದರು.

ಸಂಸ್ಥೆಯ ಸಂಯೋಜಕ ನವೀನ್ ಜೆ.ಎಚ್. ಸ್ವಾಗತಿಸಿದರು. ಹಾಸನ ಜಿಲ್ಲೆಯ ಸಂಯೋಜಕ ಚೆನ್ನಬಸವೇಶ್ವರ ವಂದಿಸಿದರು. ವಿಕಸನ ಸಂಸ್ಥೆಯ ದಯಾಕುಮಾರ್ ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-126-550940200

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.