ಚಿಕ್ಕಮಗಳೂರು: ಜಿಲ್ಲಾ ಬೋವಿ ಸಮಾಜಕ್ಕೆ ನೂತನ ಕಾರ್ಯಾಧ್ಯಕ್ಷರಾಗಿ ಜಿ.ರಮೇಶ್ ಮತ್ತು ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ವಕೀಲ ಪರಮೇಶ್ ಆಯ್ಕೆಯಾದರು.

ಸಮಾಜದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ದಿಲೀಪ್ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಕೊಲ್ಲಾಭೊವಿ ನೇತೃತ್ವದಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ರಮೇಶ್, ‘ಜಿಲ್ಲೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾಯವು ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿನ್ನೆಡೆ ಹೊಂದಿದೆ. ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ಗಮನ ಸೆಳೆಯಬೇಕು’ ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬೋವಿ ಸಮಾಜದ ಬೃಹತ್ ಸಮಾವೇಶ ಹಾಗೂ ಸಮುದಾಯದ ಅನುಕೂಲಕ್ಕೆ ಸಮುದಾಯ ಭವನ ನಿರ್ಮಿಸಲು ಶಾಸಕರ ಗಮನ ಸೆಳೆಯಲಾಗುವುದು. ಒಳ ಮೀಸಲಾತಿಯಿಂದ ಬೋವಿ ಸಮು ದಾಯಕ್ಕೆ ಸಮಸ್ಯೆಯಾಗಿದ್ದು, ಹಳೇ ಮೀಸಲಾತಿ ಜಾರಿಗೊಳಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಬೋವಿ ಸಮಾಜದ ಬಹುತೇಕರು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದು, ಸ್ಥಳೀಯ ಜನ ಪ್ರತಿನಿಧಿಗಳು ಸಹಕಾರ ನೀಡಬೇಕು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬೋವಿ ಸಮುದಾಯಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಆಯ್ಕೆಯಾದ ಪದಾಧಿಕಾರಿಗಳು: ಟಿ.ವಿ.ಕೃಷ್ಣಪ್ಪ (ಜಿಲ್ಲಾ ಖಜಾಂಚಿ), ಗೌರೀಶ್ (ತರೀಕೆರೆ ಕಾರ್ಯಾಧ್ಯಕ್ಷ), ಧನಪಾಲ್(ಗೌರವಾಧ್ಯಕ್ಷ), ಶಿವಶಂಕರ್(ಉಪಾಧ್ಯಕ್ಷ), ಪರಮೇಶ್(ಪ್ರಧಾನ ಕಾರ್ಯದರ್ಶಿ), ಕುಮಾರ್ (ಸಂಘಟನಾ ಕಾರ್ಯದರ್ಶಿ).

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-126-821761806

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.