ಚಿಕ್ಕಮಗಳೂರು: ಸುಸಜ್ಜಿತ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಜಾಗದ ಅಗತ್ಯ ಇರುವುದರಿಂದ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಲಾಗಿದೆ ಎಂದು ನಗರಸಭೆ ಆಯುಕ್ತ ಬಿ.ಸಿ. ಬಸವರಾಜ್ ತಿಳಿಸಿದರು.

ಬಸ್ ನಿಲ್ದಾಣದ ಸಮೀಪ ಇದ್ದ ಇಂದಿರಾ ಕ್ಯಾಂಟೀನ್ ಅನ್ನು ಕೆ.ಎಂ.ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪ ನಗರಸಭೆ ಮಳಿಗೆಗೆ ಸ್ಥಳಾಂತರ ಮಾಡಲಾಗಿದ್ದು, ಹೊಸ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.

ಕೆಎಸ್ಆರ್ಟಿಸಿ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣದ ಪಕ್ಕದಲ್ಲಿ ಇಂದಿರಾ ಕ್ಯಾಂಟೀನ್ ಇತ್ತು. ₹20 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣವಾಗುತ್ತಿದೆ. ಕೆಎಸ್ಆರ್ಟಿಸಿ ಜಾಗವನ್ನೇ ಇಂದಿರಾ ಕ್ಯಾಂಟೀನ್ಗೆ ಪಡೆಯಲಾಗಿತ್ತು. ಅವರಿಗೆ ಜಾಗ ಅಗತ್ಯ ಇರುವುದರಿಂದ ಬಿಟ್ಟುಕೊಡಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ಮತ್ತೆ ಅಲ್ಲಿ ಅವಕಾಶ ನೀಡುವುದಾಗಿ ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಬೇರೆಡೆ ಸೂಕ್ತ ಜಾಗ ಸಿಗಲಿಲ್ಲ. ತುರ್ತಾಗಿ ಸ್ಥಳಾಂತರ ಮಾಡಬೇಕಿದ್ದ ಕಾರಣ ಜನನಿಬೀಡ ಸ್ಥಳವನ್ನು ಆಯ್ಕೆಮಾಡಲಾಗಿದೆ. ಅತಿ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್ನಲ್ಲಿ ಊಟ, ಉಪಾಹಾರ ನೀಡಲಾಗುತ್ತಿದೆ. ನಾಗರಿಕರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಅಜಾದ್ ಪಾರ್ಕ್ ವೃತ್ತದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಪರಿಶೀಲನೆ ನಡೆಸಲಾಯಿತು. ಆದರೆ, ಹಿಂಭಾಗದಲ್ಲಿ ಮೆಸ್ಕಾಂ ಕಚೇರಿ ಇದ್ದು, ಜಾಗ ಕಿರಿದಾದ ಕಾರಣ ಸಾಧ್ಯವಾಗಲಿಲ್ಲ. ಜಿಲ್ಲಾ ಪಂಚಾಯಿತಿ ಯಿಂದ ಈಗ ಅಕ್ಕಾ ಕೆಫೆ ತೆರೆಯಲು ಡಿ.ಸಿ ಅನುಮೋದನೆಗೆ ಪತ್ರ ರವಾನಿಸ ಲಾಗಿದೆ. ಅನುಮೋದನೆ ದೊರೆತ ಬಳಿಕ ಶೀಘ್ರದಲ್ಲಿ ಅಕ್ಕಾ ಕೆಫೆ ಆರಂಭವಾಗಲಿದೆ ಎಂದು ಭರವಸೆನೀಡಿದರು.

ನಗರಕ್ಕೆ ಹಿರೇಕೊಳಲೆ ಮತ್ತು ಯಗಚಿ ಜಲಾಶಯದಿಂದ ಕುಡಿಯುವ ನೀರು ಸರಬರಾಜಾಗುತ್ತಿದ್ದು, ಮುಂದಿನ ಒಂದು ವರ್ಷದ ಅವಧಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಇಂದಿರಾ ಕ್ಯಾಂಟೀನ್ಗೆ ತೊಂದರೆ ಆಗದಂತೆ ಅನಿಲ ಸರಬರಾಜು ಮಾಡಲು ಏಜೆನ್ಸಿಗಳಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಮುನ್ನೆಚ್ಚರಿಕೆಯಾಗಿ ಸೌದೆ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಹೇಳಿದರು.

ನಗರಸಭೆ ಉಪಾಧ್ಯಕ್ಷೆ ಲಲಿತಾ ರವಿನಾಯ್ಕ, ಪರಿಸರ ಎಂಜಿನಿಯರ್ ವೆಂಕಟೇಶ್, ಆರೋಗ್ಯ ನಿರೀಕ್ಷಕ ರಂಗಪ್ಪ, ಈಶ್ವರ್, ವೆಂಕಟೇಶ್, ನಾಗಪ್ಪ, ಪೌರ ಕಾರ್ಮಿಕರ ಸಂಘದಅಧ್ಯಕ್ಷ ಅಣ್ಣಯ್ಯ, ಶ್ರೀನಿವಾಸ್, ವಿವೇಕ್, ರಮೇಶ್, ಇಂದಿರಾ ಕ್ಯಾಂಟೀನ್ ವ್ಯವಸ್ಥಾಪಕ ಕೃಷ್ಣೇಗೌಡ, ಎಂಜಿನಿಯರ್ ಸೌಜನ್ಯ, ಮಂಜುನಾಥ್ ಪಾಟೀಲ್, ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಸಿ.ಸಿ. ಮಧು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-126-306431413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.