ಚಿಕ್ಕಮಗಳೂರು: ಮಹಿಳೆಯರನ್ನು ಕಾಡುತ್ತಿರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್ಪಿವಿ ಲಸಿಕೆ ಅತ್ಯಂತ ಪರಿಣಾಮಕಾರಿ. ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಇಲಾಖೆ ವತಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಎಚ್ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಸಿಕ್ಕ ನಂತರ ಭಾರತೀಯರ ಸರಾಸರಿ ಜೀವಿತಾವಧಿ ಕೇವಲ 40ರಿಂದ 50 ವರ್ಷಗಳಷ್ಟಿತ್ತು. ಅಂದು ರೋಗ ನಿರೋಧಕ ಶಕ್ತಿ ಕಡಿಮೆ ಇದ್ದ ಕಾರಣ ಸಾಂಕ್ರಾಮಿಕ ಕಾಯಿಲೆಗಳಿಗೆ ಜನರು ಬಲಿಯಾಗುತ್ತಿದ್ದರು. ಆದರೆ, ಇಂದು ಪೋಲಿಯೊ, ಟಿ.ಬಿ ರೀತಿಯ ರೋಗಗಳನ್ನು ಲಸಿಕೆಗಳ ಮೂಲಕ ಯಶಸ್ವಿಯಾಗಿ ತಡೆಗಟ್ಟಲಾಗಿದೆ. ಇದರ ಪರಿಣಾಮ ಜೀವಿತಾವಧಿ 60-70 ವರ್ಷಕ್ಕೆ ಏರಿಕೆಯಾಗಿದೆ. ಹಾಗೆಯೇ ಪ್ರಸ್ತುತ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಗರ್ಭಕಂಠದ ಕ್ಯಾನ್ಸರ್ ತಡೆಯಲು ಈ ಎಚ್ಪಿವಿ ಲಸಿಕೆ ಶ್ರೀರಕ್ಷೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಶೇ 51ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ರಾಜ್ಯ ಮಟ್ಟದಲ್ಲಿ ಜಿಲ್ಲೆ 6ನೇ ಸ್ಥಾನದಲ್ಲಿದೆ. ಉಳಿದ ಶೇ 49ರಷ್ಟು ಗುರಿ ತಲುಪಲು ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಶ್ರಮಿಸಬೇಕು. ಶಾಲೆಗಳಿಗೆ ರಜೆ ಇರುವ ಕಾರಣ ಮಕ್ಕಳು ಮನೆಗಳಲ್ಲಿ ಇರುತ್ತಾರೆ, ಅಂಥವರನ್ನು ಗುರುತಿಸಿ ಲಸಿಕೆ ಹಾಕಿಸಬೇಕು. ಲಸಿಕೆ ಪಡೆದ ಮಕ್ಕಳ ಪೋಷಕರಿಂದ ಸಣ್ಣ ವಿಡಿಯೊಗಳನ್ನು ಚಿತ್ರಿಸಿ, ಅದನ್ನು ಇತರ ಪೋಷಕರಿಗೆ ತೋರಿಸುವ ಮೂಲಕ ಅವರಲ್ಲಿರುವ ಗೊಂದಲ ನಿವಾರಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್ಗೆ ಲಸಿಕೆಗೆ ₹12 ಸಾವಿರದಿಂದ ₹14 ಸಾವಿರ ಇದೆ. ಈ ಲಸಿಕೆಯನ್ನು ಸರ್ಕಾರ ಉಚಿತವಾಗಿ ನೀಡುತ್ತಿದ್ದು, ಎಲ್ಲರೂ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್ಬಾಬು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೀಮಾ, ವೈದ್ಯಾಧಿಕಾರಿಗಳಾದ ಡಾ.ರಂಜಿತಾ, ಡಾ. ದಿವ್ಯಾಶ್ರೀ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-126-722085315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.