ಚಿಕ್ಕಮಗಳೂರು: ತಾಲ್ಲೂಕಿನ ಚಿಕ್ಕಹಳ್ಳ ಗ್ರಾಮಕ್ಕೆ ರಸ್ತೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ಚಿಕ್ಕಹಳ್ಳ ಗ್ರಾಮದ ರಸ್ತೆ ಹೋರಾಟ ಸಮಿತಿ, ರೈತ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರ ಅರಣ್ಯ ಇಲಾಖೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಎಐಟಿ ವೃತ್ತದಿಂದ ನಗರದ ಉಪ ಅರಣ್ಯ ಸಂರಕ್ಷಣಾಕಾರಿ ಕಚೇರಿ ತನಕ ಮೆರವಣಿಗೆ ನಡೆಸಿ ನಂತರ, ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಮಹೇಶ್ ಮಾತನಾಡಿ, ‘ಆಲ್ದೂರು ಹೋಬಳಿ ಸತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹಳ್ಳ ಗ್ರಾಮಕ್ಕೆ ತೆರಳಲು ಇದ್ದ ರಸ್ತೆಯನ್ನು ಖಾಸಗಿ ವ್ಯಕ್ತಿಗಳು ವಶಪಡಿಸಿಕೊಂಡಿದ್ದಾರೆ. ನ್ಯಾಯಾಲಯದ ಆದೇಶ ತಂದು ರಸ್ತೆ ಬಂದ್ ಮಾಡಿರುವುದರಿಂದ 20ಕ್ಕೂ ಹೆಚ್ಚು ಕುಟುಂಬಗಳು ಕಾಲುದಾರಿಯಲ್ಲೇ ನಡೆದು ಸಾಗಬೇಕಾದ ಸ್ಥಿತಿ ಇದೆ’ ಎಂದರು.

ಗ್ರಾಮಕ್ಕೆ ರಸ್ತೆ ಬಿಡಿಸಿಕೊಡುವ ಸಂಬಂಧ ಗ್ರಾಮಸ್ಥರು ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸಬೂಬು ನೀಡಿ ಬಗೆಹರಿಸುತ್ತಿಲ್ಲ. ಜನಪ್ರತಿನಿಧಿಗಳು ಹಾಗೂ ಸಚಿವರು ಕೂಡ ಸಮಸ್ಯೆ ಬಗ್ಗೆ ಗಮನ ಹರಿಸುತ್ತಿಲ್ಲ. ಆದ್ದರಿಂದ ಗ್ರಾಮೀಣ ಭಾಗದ ರೈತರ ಸಮಸ್ಯೆ ಹೇಳತೀರವಾಗಿದೆ ಎಂದು ಹೇಳಿದರು.

ಚಿಕ್ಕಹಳ್ಳ ಗ್ರಾಮಸ್ಥ ದೀಕ್ಷಿತ್ ಮಾತನಾಡಿ, ‘ಪ್ರಭಾವಿ ವ್ಯಕ್ತಿಯೊಬ್ಬರು ನ್ಯಾಯಾಲಯದ ಅನುಮತಿ ಪಡೆದು ಗ್ರಾಮಸ್ಥರು ಸಂಚರಿಸುವ ರಸ್ತೆಗೆ ಅಡ್ಟಗಟ್ಟಿದ್ದಾರೆ. ಇದರಿಂದ ಜನ ತೊಂದರೆ ಅನುಭವಿಸುತ್ತಿದ್ದೇವೆ’ ಎಂದು ಹೇಳಿದರು. ದಸಂಸ ಮುಖಂಡ ಮರ್ಲೆ ಅಣ್ಣಯ್ಯ, ಮುಖಂಡರಾದ ಬಸವರಾಜ್, ಸುನಿಲ್ಕುಮಾರ್, ಕೆ.ಭರತ್, ಚಿಕ್ಕಹಳ್ಳ ಗ್ರಾಮಸ್ಥರಾದ ಸಚಿನ್, ಆಕಾಶ್ಗೌಡ, ಪ್ರಮೋದ್, ಚಿರಾಗ್, ಪ್ರಶಾಂತ್, ರಮೇಶ್ಗೌಡ, ಹೂವೇಗೌಡ, ಮುರಳಿ, ಕಾಳೇಗೌಡ, ಸುದನ್ವ, ಮಲ್ಲೇಶ್, ಮೋಹನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-126-455182183

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.