ಚಿಕ್ಕಮಗಳೂರು: ತಾಲ್ಲೂಕಿನ ಚಿಕ್ಕಹಳ್ಳ ಗ್ರಾಮಕ್ಕೆ ಒಂದು ವಾರದೊಳಗೆ ಸರ್ಕಾರಿ ರಸ್ತೆ ಕಲ್ಪಿಸದಿದ್ದರೆ ಜನ ಜಾನುವಾರುಗಳ ಸಮೇತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಚಿಕ್ಕಹಳ್ಳ ಗ್ರಾಮಸ್ಥ ಪ್ರಶಾಂತ್ ತಿಳಿಸಿದರು.

ಸತ್ತಿಹಳ್ಳಿ ಗ್ರಾಮದ ಸರ್ವೆ ನಂಬರ್ 155 ಹಾಗೂ 384ರಲ್ಲಿ ಜಿಲ್ಲಾಧಿಕಾರಿ ಸೂಚನೆಯಂತೆ ನೂರಾರು ವರ್ಷಗಳಿಂದ ಬಳಕೆಯಲ್ಲಿದ್ದ ರಸ್ತೆಯನ್ನು ಕಾಯಂ ಮಾಡಿ ಉಪವಿಭಾಗಾಧಿಕಾರಿ ಆದೇಶ ನೀಡಿದ್ದಾರೆ. ಆದರೂ ರಸ್ತೆ ನಿರ್ಮಾಣವಾಗಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಹೇಳಿದರು.

ಆದೇಶದ ವಿರುದ್ಧ ಕೆಲವರು ಹೈಕೋರ್ಟ್ನಲ್ಲಿ ಅರ್ಜಿ ಹಾಕಿ ಉಪವಿಭಾಗಾಧಿಕಾರಿ ಆದೇಶಕ್ಕೆ ತಡೆಯಾಜ್ಞೆ ತಂದಿದ್ದಾರೆ. ರಸ್ತೆಗೆ ಗೇಟ್ ಹಾಗೂ ಬೇಲಿ ನಿರ್ಮಿಸಿ ಗ್ರಾಮಸ್ಥರಿಗೆ ಪಟ್ಟಣದ ಸಂಪರ್ಕ ಇಲ್ಲದಂತೆ ಮಾಡಿದ್ದಾರೆ. ಗ್ರಾಮಸ್ಥರಿಗೆ ಕೃಷಿ ಚಟುವಟಿಕೆಗೆ, ಮಕ್ಕಳು ಶಾಲೆ, ಆಸ್ಪತ್ರೆಗೆ ತೆರಳಲು ದಾರಿ ಇಲ್ಲವಾಗಿದೆ. ಕಾಡಿನ ಕಾಲು ದಾರಿ ಹಿಡಿದು 5ರಿಂದ 6 ಕಿಲೋ ಮೀಟರ್ ನಡೆದು ಮುಖ್ಯ ರಸ್ತೆಗೆ ತಲುಪಬೇಕಾದ ಸ್ಥಿತಿ ಇದೆ ಎಂದರು.

ಕಂದಾಯ ಇಲಾಖೆಗೆ ಸೇರಿದ ಗೋಮಾಳದ ಜಾಗದಲ್ಲಿ ರಸ್ತೆ ನಿರ್ಮಿಸಲು ಜಾಗ ಗುರುತಿಸಲಾಗಿದೆ. ಅರಣ್ಯ ಇಲಾಖೆ ಕೂಡ ಸ್ಪಂದಿಸಿದೆ. ಈಗ ವಿನಾಕಾರಣ ತಕರಾರು ತೆಗೆದು ರಸ್ತೆ ನಿರ್ಮಿಸಲು ಕೆಲವರು ಅಡ್ಡಿಪಡಿಸುತ್ತಿದ್ದಾರೆ ಎಂದು ಅವರು ದೂರಿದರು.

ಸುದ್ದಿಗೋಷ್ಠಿಯಲ್ಲಿ ಚಿಕ್ಕಹಳ್ಳ ಗ್ರಾಮಸ್ಥರಾದ ದೀಕ್ಷಿತ್, ಚಿರಂತ್, ಪ್ರಮೋದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-126-2126319888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.