ಚಿಕ್ಕಮಗಳೂರು: ಬಾಲ್ಯ ವಿವಾಹಕ್ಕೆ ನಿಷೇಧವಿದ್ದರೂ, ರಹಸ್ಯವಾಗಿ ಅಪ್ರಾಪ್ತ ವಯಸ್ಕರ ಮದುವೆ ನಡೆದರೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ತಹಶೀಲ್ದಾರ್ ರೇಷ್ಮಾ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಕುರಿತು ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

21 ವರ್ಷ ವಯಸ್ಸಿನೊಳಗಿನ ಗಂಡು ಅಥವಾ 18 ವರ್ಷ ವಯಸ್ಸಿನೊಳಗಿನ ಹೆಣ್ಣಿನ ಮದುವೆಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನ್ವಯವಾಗಲಿದೆ. ಅಂತಹ ಮದುವೆಗೆ ಕಾನೂನಿನಲ್ಲಿ ಅವಕಾಶವಿಲ್ಲ. ಬಾಲ್ಯ ವಿವಾಹ ನಡೆದರೆ ಅಂತಹವರ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯೊಂದಿಗೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೂಲಿ ಕಾರ್ಮಿಕರು ಮತ್ತು ವಲಸಿಗರು ನೆಲೆಸಿರುವ ಪ್ರದೇಶಗಳಲ್ಲಿ, ಲೈನ್ ಮನೆಗಳಲ್ಲಿ ಬಾಲ್ಯ ವಿವಾಹ ಮತ್ತು ಪೊಕ್ಸೊ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಈ ಸಮಿತಿಗಳು ನಿರಂತರವಾಗಿ ಸಭೆ ನಡೆಸಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ಗಮನಹರಿಸಬೇಕು ಎಂದು ತಿಳಿಸಿದರು.

ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಮಾತನಾಡಿ, ‘ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಈ ವರ್ಷದ ಜನವರಿಯಿಂದ ಮಾರ್ಚ್ ತನಕ 5 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 4 ಬಾಲ್ಯ ವಿವಾಹ ತಡೆಯಲಾಗಿದೆ. ಒಂದು ಬಾಲ್ಯ ವಿವಾಹ ನಡೆದಿದ್ದು, ಈ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಮೊದಲನೆಯ ಮಗುವಿಗೆ ₹5 ಸಾವಿರ ಸಹಾಯಧನ ನೀಡಲಾಗುತ್ತಿದೆ. ಎರಡನೇ ಮಗು ಹೆಣ್ಣು ಮಗುವಾಗಿದ್ದರೆ ₹6 ಸಾವಿರ ಸಹಾಯಧನ ನೀಡಲಾಗುತ್ತದೆ. ಚಿಕ್ಕಮಗಳೂರು ತಾಲ್ಲೂಕಿನಲ್ಲಿ 1,182 ಫಲಾನುಭವಿಗಳಿಗೆ ಈ ಯೋಜನೆಯಡಿ ನೋಂದಾಯಿಸಲಾಗಿದೆ. ಗುರಿ ಮೀರಿದ ಸಾಧನೆಯಾಗಿದೆ. 2025-26ನೇ ಸಾಲಿನಲ್ಲಿ ಒಟ್ಟು ₹29.61 ಲಕ್ಷ ಪಾವತಿಸಲಾಗಿದೆ ಎಂದು ಸಭೆಗೆ ಸಿಡಿಪಿಒ ರಂಗನಾಥ್ ಮಾಹಿತಿ ನೀಡಿದರು.

ಪೋಷಣ್ ಅಭಿಯಾನದಡಿ 6 ವರ್ಷದವರೆಗಿನ ಮಕ್ಕಳು, ಗರ್ಭಿಣಿಯರು-ಬಾಣಂತಿಯರು, ಕಿಶೋರಿಯರ ಆರೋಗ್ಯ ಮತ್ತು ಪೌಷ್ಟಿಕತೆಯ ಬಗ್ಗೆ ಗಮನ ಹರಿಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ಮತ್ತು ಮಾರಾಟದ ಪ್ರಕರಣಗಳು ತಾಲ್ಲೂಕಿನಲ್ಲಿ ವರದಿಯಾಗಿಲ್ಲ ಎಂದು ತಿಳಿಸಿದರು.

ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ತ್ವರಿತವಾಗಿ ಸಂತ್ರಸ್ತರಿಗೆ ನೆರವು ನೀಡಲಾಗುತ್ತಿದೆ. ಅಗತ್ಯ ಬಿದ್ದರೆ ನೊಂದ ಮಹಿಳೆಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-126-1960283368

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.