ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ: ಅವಿರೋಧ ಆಯ್ಕೆ ಬಹುತೇಕ ನಿಚ್ಚಳ

21ರಂದು ಚುನಾವಣೆ
Last Updated 13 ಜನವರಿ 2022, 16:32 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಜ. 21ರಂದು ಚುನಾವಣೆ ನಿಗದಿಯಾಗಿದೆ. ಅವಿರೋಧವಾಗಿ ಆಯ್ಕೆ ನಡೆಯುವುದು ಬಹುತೇಕ ನಿಚ್ಚಳವಾಗಿದೆ.

ನಗರಸಭೆ ಕಚೇರಿಯ ಸಭಾಂಗಣದಲ್ಲಿ ಮಧ್ಯಾಹ್ನ 1.10ಕ್ಕೆ ಪ್ರಕ್ರಿಯೆ ನಡೆಯಲಿದೆ. ಅಧ್ಯಕ್ಷ ಸ್ಥಾನ– ಹಿಂದುಳಿದ ವರ್ಗ ‘ಎ’ ಹಾಗೂ ಉಪಾಧ್ಯಕ್ಷ ಸ್ಥಾನ– ಹಿಂದುಳಿದ ವರ್ಗ ‘ಬಿ’ ಮೀಸಲಾತಿ ಇದೆ.

ಜ.21ರಂದು (ಸಾರ್ವತ್ರಿಕ ರಜಾ ದಿನ ಹೊರತುಪಡಿಸಿ) ಬೆಳಿಗ್ಗೆ 11 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 21ರಂದು ಮಧ್ಯಾಹ್ನ 1 ಗಂಟೆಯಿಂದ 1.05ರವರೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಮಧ್ಯಾಹ್ನ1.05ರಿಂದ 1.10ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಇದೆ. ನಂತರ ಅಗತ್ಯವಿದ್ದಲ್ಲಿ ಚುನಾವಣೆ ನಡೆಯಲಿದೆ ಎಂದು ಹಿರಿಯ ಉಪವಿಭಾಗಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಡಾ.ಎಚ್.ಎಲ್‌. ನಾಗರಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು. ಬಿಜೆಪಿ– 18, ಕಾಂಗ್ರೆಸ್‌– 12, ಜೆಡಿಎಸ್‌–2, ಎಸ್‌ಡಿಪಿಐ–1 ಹಾಗೂ ಪಕ್ಷೇತರರ– ಎರಡು ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ. ನಗರಸಭೆ ಆಡಳಿತ ಮೂರನೇ ಬಾರಿಗೆ ಬಿಜೆಪಿ ಪಾಲಾಗಿದೆ.

ಆಕಾಂಕ್ಷಿಗಳ ಕಸರತ್ತು

ನಗರಸಭೆಯ ಒಟ್ಟು 35 ಸ್ಥಾನಗಳಲ್ಲಿ 18ರಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಆಡಳಿತ ಚುಕ್ಕಾಣಿಗೆ ತೆಕ್ಕೆಗೆ ಬಿದ್ದಿದೆ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳು ಕಸರತ್ತು ಆರಂಭಿಸಿದ್ದಾರೆ.

‘ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಹಲವರು ಇದ್ದಾರೆ. ಪಕ್ಷದ ಸಮನ್ವಯ ಸಮಿತಿ (ಕೋರ್‌ ಕಮಿಟಿ) ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಸಿ. ಕಲ್ಮರುಡಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

‘ಅಧ್ಯಕ್ಷ ಸ್ಥಾನಕ್ಕೆ ವರಸಿದ್ಧಿ ವೇಣುಗೋಪಾಲ್‌, ಮಧುಕುಮಾರ್‌ರಾಜ್‌ ಅರಸ್‌, ರಾಜು ಸಹಿತ ಇಬ್ಬರು ಮಹಿಳೆಯರು ಆಕಾಂಕ್ಷಿಗಳಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಐದಾರು ಮಂದಿ ಅಕಾಂಕ್ಷಿಗಳು ಇದ್ದಾರೆ. ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಲಿದೆ’ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT