ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಸುಟ್ಟ ಬೆಕ್ಕಿನಂತಾಗಿದ್ದಾರೆ ಬಿಜೆಪಿ ನಾಯಕರು: ಕಾಂಗ್ರೆಸ್ ವ್ಯಂಗ್ಯ

Published 1 ಜೂನ್ 2023, 16:33 IST
Last Updated 1 ಜೂನ್ 2023, 16:33 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಆ ಪಕ್ಷದ ನಾಯಕರು ಅಧಿಕಾರ ಇಲ್ಲದೆ ಬಾಲ ಸುಟ್ಟ ಬೆಕ್ಕಿನಂತಾಗಿದ್ದಾರೆ’ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ರೂಬೆನ್ ಮೊಸಸ್ ವ್ಯಂಗ್ಯವಾಡಿದರು.

ಬಿಜೆಪಿಯಿಂದ ಹೊರ ಬಂದು 25 ದಿನಗಳಲ್ಲೇ ಶಾಸಕರಾಗಿರುವ ತಮ್ಮಯ್ಯ ಅವರನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗುತ್ತಿಲ್ಲ. ಆದ್ದರಿಂದ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

ಚಿಕ್ಕಮಗಳೂರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ತಮ್ಮಯ್ಯ ಅವರಿಗೆ ನೀಡಲಿಲ್ಲ. ಆದ್ದರಿಂದ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾದರು. ಪರೋಕ್ಷವಾಗಿ ಬಿಜೆಪಿಯವರೇ ಇದಕ್ಕೆ ಕಾರಣರಾದರು. ಒಳ್ಳೆಯದೇ ಆಯಿತು ಎಂದರು.

‘ಐದು ಗ್ಯಾರಂಟಿಗಳ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ಮರ್ಯಾದೆ ಇದ್ದರೆ ಮೊದಲು ಪ್ರಧಾನಿ ಅವರಿಗೆ ಹೇಳಿ ಕಪ್ಪು ಹಣ ತರಿಸಿ ಪ್ರತಿ ಬಡವರ ಖಾತೆಗೆ ₹15 ಲಕ್ಷ  ಕೊಡಿಸಲಿ’ ಎಂದು ಸವಾಲು ಹಾಕಿದರು.

‘ಐದು ಗ್ಯಾರಂಟಿಗಳನ್ನು ಕೊಡುವಾಗ ಅಂಕಿ– ಅಂಶ ನೋಡಬೇಕಾಗುತ್ತದೆ. ಸಾಧಕ– ಬಾಧಕ ತಿಳಿದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲವೇ’ ಎಂದು ಪ್ರಶ್ನಿಸಿದರು.

ಗ್ಯಾರಂಟಿಗಳು ಕಾರ್ಯಗತವಾಗಬಾರದು ಎಂದು ಬಿಜೆಪಿಯವರು ಕಾಯುತ್ತಿದ್ದಾರೆ. ಅದನ್ನೇ  ಆಧಾರವಾಗಿಟ್ಟುಕೊಂಡು ಜನರನ್ನು ಕಾಂಗ್ರೆಸ್ ವಿರುದ್ಧ ಎತ್ತಿ ಕಟ್ಟಬಹುದು ಎಂಬ ಆಲೋಚನೆಯಲ್ಲಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಅದಕ್ಕೆ ಅವಕಾಶ ಕೊಡುವುದಿಲ್ಲ. ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರುತ್ತಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT