ಚಿಕ್ಕಮಗಳೂರು: ‘ಸಹಕಾರ ಸಂಘಗಳ ಕಾಯ್ದೆಗಳಿಗೆ ಸರ್ಕಾರ ತಿದ್ದುಪಡಿ ತರಲು ಮುಂದಾಗಿರುವ ಕ್ರಮ ಸರಿಯಲ್ಲ’ ಎಂದು ರಾಜ್ಯ ಸಹಕಾರ ವಸತಿ ಮಹಾಮಂಡಲದ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಹೇಳಿದರು.

ನಗರದ ಡಿಸಿಸಿ ಬ್ಯಾಂಕ್ ಭವನದಲ್ಲಿ ನಗರ ಗೃಹ ನಿರ್ಮಾಣ ಸಹಕಾರ ಸಂಘ ಶತಮಾನೋತ್ಸವದ ನೆನಪಿನ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಸರ್ಕಾರ ತರುವ ಕಾಯ್ದೆಗಳು ಸಹಕಾರ ಕ್ಷೇತ್ರ ಬೆಳೆಯಲು ಸಹಕಾರಿಯಾಗಿರಬೇಕು. ಆದರೆ, ಈ ಕ್ಷೇತ್ರವನ್ನು ಹಾಳು ಮಾಡಬಾರದು. ಸರ್ಕಾರ ಮಂಡಿಸಲು ಮುಂದಾಗಿರುವ ತಿದ್ದುಪಡಿ ಮಸೂದೆಯನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು.

‘ರಾಜ್ಯದಲ್ಲಿ ಸಾವಿರಾರು ಸಹಕಾರ ಸಂಘಗಳಿವೆ. ಅತಿ ಹೆಚ್ಚು ನಿವೇಶನಗಳನ್ನು ಕಡಿಮೆ ಬೆಲೆಗೆ ನೀಡುವ ಮೂಲಕ ಇಂದಿಗೂ ಜೀವಂತವಾಗಿವೆ. ಸರ್ಕಾರಕ್ಕಿಂತ ಹೆಚ್ಚಿನ ನಿವೇಶನಗಳನ್ನು ಸಾರ್ವಜನಿಕರಿಗೆ ನೀಡಿರುವ ಬಹಳಷ್ಟು ಗೃಹ ನಿರ್ಮಾಣ ಸಹಕಾರ ಸಂಘಗಳು ರಾಜ್ಯದಲ್ಲಿ ಇನ್ನೂ ಜೀವಂತವಾಗಿವೆ. ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲೂ ಅವು ಕಾರ್ಯನಿರ್ವಹಿಸುತ್ತಿವೆ’ ಎಂದರು.

ಸಹಕಾರ ಸಂಘಗಳನ್ನು ಉಳಿಸಿ ಬೆಳೆಸುವುದು ಕಷ್ಟಕರವಾದ ಇಂದಿನ ಸನ್ನಿವೇಶದಲ್ಲಿ ಚಿಕ್ಕಮಗಳೂರು ಗೃಹ ನಿರ್ಮಾಣ ಸಹಕಾರ ಸಂಘ 100 ವರ್ಷಗಳನ್ನು ಪೂರೈಸುತ್ತಿರುವುದು ಶ್ಲಾಘನೀಯ ಎಂದರು.

ಡಿಸಿಸಿ ಬ್ಯಾಂಕ್ ಅಭಿವೃದ್ಧಿಗೆ ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ ಅವರ ಕೊಡುಗೆ ಅಪಾರವಾಗಿದೆ. ಶಾಸಕ ಎಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮತ್ತು ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ.ನಾರಾಯಣ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ಸಹಕಾರ ಸಂಘಕ್ಕೆ ನೂರು ವರ್ಷ ತುಂಬಿದೆ ಎಂದರೇ ಅದು ದೊಡ್ಡ ಸಾಧನೆ. ಚಿಕ್ಕಮಗಳೂರಿನಲ್ಲಿ ಪ್ರಾರಂಭವಾದ ನಗರ ಗೃಹ ನಿರ್ಮಾಣ ಸಹಕಾರ ಸಂಘ ಜನರಿಗೆ ಮನೆಗಳನ್ನು ನಿರ್ಮಿಸಿಕೊಟ್ಟಿದೆ. ಪ್ರತಿಯೊಬ್ಬರಿಗೂ ಸ್ವಂತ ಮನೆ ಹೊಂದಬೇಕು. ಕಾರು ಖರೀದಿಸಬೇಕು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಕನಸು ಇರುತ್ತದೆ. ಅವರ ಕನಸನ್ನು ಈ ಸಂಘ ನನಸಾಗಿಸಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ‘ಸಹಕಾರ ಸಂಘಗಳ ಮೂಲಕ ಶೇ 27ರಷ್ಟು ಕೃಷಿಕರಿಗೆ ಮಾತ್ರ ಸಾಲ ನೀಡಲು ಸಾಧ್ಯವಾಗಿದೆ. ಉಳಿದ ಶೇ 75ರಷ್ಟು ಕೃಷಿಕರಿಗೆ ಸಹಾಯಹಸ್ತ ಚಾಚಲು ಸಾಧ್ಯವಾಗಿಲ್ಲ. ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡದಿದ್ದರೆ ಸಹಕಾರ ಸಂಘ ಮತ್ತು ಸಹಕಾರಿ ಕ್ಷೇತ್ರ ಉಳಿಯುವುದಿಲ್ಲ’ ಎಂದು ಎಚ್ಚರಿಸಿದರು.

ಪತ್ರಕರ್ತ ಸ.ಗಿರಿಜಾ ಶಂಕರ್ ಮಾತನಾಡಿ, ‘ಬಡವರು ಕೃಷಿಕರು ಶೋಷಣೆಗೆ ಒಳಗಾಗಿದ್ದ ಸಂದರ್ಭದಲ್ಲಿ ಸಹಕಾರ ಕ್ಷೇತ್ರ ಸ್ಥಾಪನೆಗೊಂಡಿತು. 1844ರಲ್ಲಿ ಬ್ರಿಟನ್ನಲ್ಲಿ ಮೊದಲು ಆರಂಭಗೊಂಡ ಸಹಕಾರಿ ಕ್ಷೇತ್ರ. 1904ರಲ್ಲಿ ಭಾರತದ ಗುಜರಾತ್ನಲ್ಲಿ, 1906ರಲ್ಲಿ ಕರ್ನಾಟಕದಲ್ಲಿ ಆರಂಭಗೊಂಡಿತು. ರೈತರಿಗೆ ಮತ್ತು ಜನರಿಗೆ ಆಗುತ್ತಿದ್ದ ಶೋಷಣೆ ತಪ್ಪಿಸುವುದು ಮುಖ್ಯ ಉದ್ದೇಶವಾಗಿತ್ತು’ ಎಂದು ಹೇಳಿದರು.

ನಗರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ.ನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿ.ಪಂ. ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ನಗರಸಭೆ ಅಧ್ಯಕ್ಷೆ ಬಿ.ಶೀಲಾ ದಿನೇಶ್, ಸದಸ್ಯೆ ರೂಪಾ ಕುಮಾರ್, ಸಿಡಿಎ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಮಲೆನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ, ಉದ್ಯಮಿ ಅಪ್ಸರ್ ಹಿಂದೂಸ್ತಾನಿ, ಸಂಘದ ನಿರ್ದೇಶಕ ಎಲ್.ಕೆ.ವೇಣುಗೋಪಾಲ್, ಸುಮಾ ಪ್ರಸಾದ್, ಕನ್ನಡ ಸೇನೆ ಅಧ್ಯಕ್ಷ ಪಿ.ಸಿ. ರಾಜೇಗೌಡ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-126-1240616063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.