ಚಿಕ್ಕಮಗಳೂರು: ಇಂದಾವರದ ಹೋಟೆಲ್ನಲ್ಲಿ ಕೊಠಡಿ ಕೊಡುವ ವಿಚಾರದಲ್ಲಿ ಮಾಲೀಕ ಯತೀಶ್ಗೌಡ ಎಂಬುವರು ದಲಿತ ಯುವಕ ಸಂದೀಪ್ ಅವರಿಗೆ ಜಾತಿ ನಿಂದನೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ. ಯತೀಶ್ಗೌಡ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಭೀಮ್ ಆರ್ಮಿ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೇಶ್ ಒತ್ತಾಯಿಸಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಿದೆ. ದಲಿತರಿಗೆ ರಕ್ಷಣೆ ಇಲ್ಲವಾಗಿದ್ದು, ಭಯದಲ್ಲಿ ಜೀವನ ಮಾಡುವಂತಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದೇ ರೀತಿ ಪ್ರಕರಣ ಆ.12ರಂದು ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಳುವಾಗಿಲು ಗ್ರಾಮದಲ್ಲಿ ನಡೆದಿತ್ತು. ಈಗ ಪಿಸ್ತೂಲ್ ಹಣೆಗೆ ಇಟ್ಟು ಕೊಲೆಗೆ ಯತ್ನಿಸಿರುವ ಯತೀಶ್ಗೌಡಗೆ ಕಠಿಣ ಶಿಕ್ಷೆ ವಿಧಿಸಬೇಕು ಒತ್ತಾಯಿಸಿದರು.

ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದಲಿತರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಒಕ್ಕಲಿಗೆ ಸಂಘ ಸೆಪ್ಟಂಬರ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಒಕ್ಕಲಿರ ಸಂಘದವರು ದೂರು ನೀಡಿದ್ದರು. ದಲಿತರ ಮೇಲೆ ದೌರ್ಜನ್ಯ ನಡೆದಾಗ ಸತ್ಯ ಅರಿಯದೆ ಉಳ್ಳವರ ಪರವಾಗಿ ವಕಾಲತ್ತು ವಹಿಸುವುದನ್ನು ಒಕ್ಕಲಿಗರ ಸಂಘ ಬಿಡಬೇಕು ಎಂದು ಆಗ್ರಹಿಸಿದರು.

ನಾಡಪ್ರಭು ಕೆಂಪೇಗೌಡ, ರಾಷ್ಟ್ರಕವಿ ಕುವೆಂಪು ಅಂತವರ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಸಮಾಜ ನಿರ್ಮಾಣಕ್ಕೆ ಜಿಲ್ಲಾ ಒಕ್ಕಲಿಗರ ಸಂಘ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಯತೀಶ್ಗೌಡ ಪದೇ ಪದೇ ದಲಿತರಿಗೆ ಪಿಸ್ತೂಲ್ ತೋರಿಸುತ್ತಿದ್ದು, ಪಿಸ್ತೂಲ್ ಪರವಾನಗಿ ರದ್ದುಪಡಿಸಬೇಕು. ಅಲ್ಲದೇ ಅವರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್ಸಿಎ–ಸ್ಟಿ ದೌರ್ಜನ್ಯ ತಡೆ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ, ಸಂತ್ರಸ್ತರಾದ ಸಂದೀಪ್, ಮುಖಂಡರಾದ ದಿವಾಕರ, ಕಿರಣ್, ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-126-207764296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.