ಚಿಕ್ಕಮಗಳೂರು: ಮಳೆಗಾಲ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ವಿದ್ಯುತ್ ಪರಿವರ್ತಕಗಳು ಮತ್ತು ಕಂಬಗಳ ಪೈಕಿ ಹಲವು ಅಪಾಯಕಾರಿ ಸ್ಥಿತಿಯಲ್ಲಿವೆ. ಕೈಗೆ ಎಟಕುವಷ್ಟು ಹತ್ತಿರದಲ್ಲೇ ಇರುವ ವಿದ್ಯುತ್ ಪರಿವರ್ತಕಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.

ಮುಖ್ಯರಸ್ತೆ, ಗಲ್ಲಿ ರಸ್ತೆಗಳ ಅಲ್ಲಲ್ಲಿ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳ ಬಳಿ ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಸಂಭವಿಸುವುದು ಖಚಿತ. ಸುರಕ್ಷತೆ ಇಲ್ಲದಿದ್ದರೂ ಈ ಸ್ಥಳಗಳಲ್ಲಿ ಅಪಾಯ ಲೆಕ್ಕಿಸದೆ ಜನ ಓಡಾಡುತ್ತಿದ್ದಾರೆ.

ಮಳೆ ಸಂದರ್ಭದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಮರಗಳು, ಬಳ್ಳಿಗಳು ತಗುಲಿದರೆ ಪರಿವರ್ತಕಗಳು ಸುಟ್ಟು ಹೋಗುವ ಸಾಧ್ಯತೆ ಹೆಚ್ಚು. ಮಳೆಗಾಲಕ್ಕೆ ಮುನ್ನವೇ ಮೆಸ್ಕಾಂ ಸಿಬ್ಬಂದಿ ನಿರ್ವಹಣೆ ಮಾಡುವುದು ಸಾಮಾನ್ಯ. ಆದರೆ, ಈ ವರ್ಷ ಜೂನ್ ಸಮೀಪಿಸುತ್ತಿದ್ದು, ಇನ್ನೂ ಹಲವೆಡೆ ಅಪಾಯಕಾರಿ ಸ್ಥಿತಿಯಲ್ಲೇ ಉಳಿದುಕೊಂಡಿವೆ.

ಕಡೂರಿನಲ್ಲಿ ಇತ್ತೀಚೆಗೆ ವಿದ್ಯುತ್ ತಂತಿ ತಗುಲಿ ರೈತ ಮೃತಪಟ್ಟಿದ್ದು, ಮಲೆನಾಡಿನಲ್ಲಿ ಮಳೆ ನಡುವೆ ರಸ್ತೆ ಬದಿಯ ವಿದ್ಯುತ್ ಪರಿವರ್ತಕ ಸುಟ್ಟು ಆತಂಕ ಸೃಷ್ಟಿಸಿತ್ತು. ಅವಘಡಗಳು ಸಂಭವಿಸುವ ಮುನ್ನ ಎಚ್ಚರ ವಹಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಮಳೆಗಾಲಕ್ಕೂ ಮುನ್ನ ಮಾರ್ಗ ನಿರ್ವಹಣೆ ಕಾರ್ಯ ನಡೆಯುತ್ತಿದೆ. ಅದಕ್ಕಾಗಿ ಪ್ರತ್ಯೇಕ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಗಿದೆ ಎಂದು ಮೆಸ್ಕಾಂ ಅಧಿಕಾರಿಯೊಬ್ಬರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-126-1113469951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.