ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್ 6ನೇ ಜಿಲ್ಲಾ ಜಾನಪದ ಸಮ್ಮೇಳನ ಏ. 26ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆಯಲಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಗೌರವಾಧ್ಯಕ್ಷ ಜೆ.ಪಿ. ಕೃಷ್ಣೇಗೌಡ ತಿಳಿಸಿದರು.

ಗ್ರಾಮೀಣ ಜನರ ಕೃಷಿಕರ ಅನುಭವವು ನಮ್ಮ ಹಿರಿಯರ ಸಾಮಾಜಿಕ ಹಾಗೂ ನೈತಿಕ ಬದುಕಿನ ಸಾಂಸ್ಕೃತಿಕ ಸಂಕೇತವು ಹೌದು. ಈ ಜನಪದ ಸಾಹಿತ್ಯ ಕಲೆ ಉಳಿಸುವ ದೃಷ್ಟಿಯಿಂದ ಜಾನಪದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದು ಬೆಳಿಗ್ಗೆ 8ಕ್ಕೆ ರಾಷ್ಟ್ರಧ್ವಜ, ನಾಡ ಧ್ವಜಾರೋಹಣ, ಜಾನಪದ ಪರಿಷತ್ತಿನ ಧ್ವಜಾರೋಹಣ ನಡೆಯಲಿದೆ. 9ಕ್ಕೆ ನಗರದ ತಾಲ್ಲೂಕು ಕಚೇರಿ ಆವರಣದಿಂದ ಕುವೆಂಪು ಕಲಾ ಮಂದಿರದ ತನಕ ಜಾನಪದ ಕಲಾತಂಡ, ಪೂರ್ಣಕುಂಭ ಹಾಗೂ ವಾದ್ಯಗಳೊಂದಿಗೆ ಮೆರವಣಿಗೆ ಸಾಗಲಿದೆ. ಕಲಾ ತಂಡಗಳ ಪ್ರದರ್ಶನ ಉದ್ಘಾಟನೆಯನ್ನು ಬಿ.ಬಿ. ನಿಂಗಯ್ಯ ಮಾಡಲಿದ್ದಾರೆ. ಮೆರವಣಿಗೆ ಉದ್ಘಾಟನೆಯನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಚ್ ಸಮಾರಂಭ ಉದ್ಘಾಟನೆ ಮಾಡಲಿದ್ದಾರೆ. ಕಾಂಗ್ರೆಸ್ ಮುಖಂಡರಾದ ಮೋಟಮ್ಮ ಸಮ್ಮೇಳನ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಜಾನಪದ ವಾದ್ಯಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಶಾಸಕ ಎಚ್.ಡಿ. ತಮ್ಮಯ್ಯ, ಜಾನಪದ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಜಾನಪದ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದರು.

ಮಧ್ಯಾಹ್ನ 1 ಗಂಟೆಗೆ ರೈತ ಜಾನಪದ ಕಾರ್ಯಕ್ರಮ ನಡೆಯಲಿದ್ದು, ರೈತ ಹೋರಾಟಗಾರ ಎಚ್.ಎಚ್ ದೇವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. 2.30ಕ್ಕೆ ಮಹಿಳಾ ಜಾನಪದ ಕಾರ್ಯಕ್ರಮ ನಡೆಯಲಿದ್ದು, ಆಶ್ರಯ ಫೌಂಡೇಶನ್ ಅಧ್ಯಕ್ಷೆ ವರ್ಷ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಜನಪದ ಜಗುಲಿ ಕಾರ್ಯಕ್ರಮ ನಡೆಯಲಿದೆ. ಆದಿಚುಂಚನಗಿರಿ ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಸಿ.ಕೆ. ಸುಬ್ಬರಾಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ. ಸುರೇಶ್, ಉಪಾಧ್ಯಕ್ಷ ವಿನೀತ್ ಕುಮಾರ್, ಆಶ್ರಯ ಫೌಂಡೇಷನ್ ಅಧ್ಯಕ್ಷ ವರ್ಷ, ಚಿಕ್ಕಮಗಳೂರು ತಾಲ್ಲೂಕು ಕಜಾಪ ಅಧ್ಯಕ್ಷ ಸಚಿನ್, ಮೂಡಿಗೆರೆ ತಾಲ್ಲೂಕು ಕಜಾಪ ಅಧ್ಯಕ್ಷ ರವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-126-334833722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.