ಚಿಕ್ಕಮಗಳೂರು: ‘ಡಿ.ಕೆ.ಶಿವಕುಮಾರ್ ಅವರಿಗೆ ತಡವಾಗಿ ಆದರೂ ಮುಖ್ಯಮಂತ್ರಿ ಆಗುವ ಅವಕಾಶ ಬಂದಿದೆ. ಪ್ರಯೋಜನ ಇಲ್ಲದ ಯೋಜನೆಗಳಿಂದ ಸರ್ಕಾರದ ಬೊಕ್ಕಸ ಬರಿದಾಗುತ್ತಿದೆ. ಈ ಬಗ್ಗೆ ಗಟ್ಟಿ ನಿಲುವು ತೆಗೆದುಕೊಳ್ಳುವ ಆತ್ಮಬಲ ಅವರಿಗೆ ಬರಲಿ’ ಎಂದು ಬಾಳೆಹೊನ್ನೂರು ರಂಭಾಪುರಿ ಮಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು. ‘ರಾಜ್ಯದ ಅಭಿವೃದ್ಧಿ ಬಗ್ಗೆ ಬಹಳಷ್ಡು ಅಪೇಕ್ಷೆ ಇದೆ. ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಇದಕ್ಕೆ ಬೇಕಿರುವ ಶಕ್ತಿ ಅವರಿಗೆ ದೊರಕಲಿ’ ಎಂದು ಪ್ರತಿಕ್ರಿಯಿಸಿದರು.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘2023ರಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿತು. ಈಗ ಮೂರು ವರ್ಷ ದಾಟಿದೆ. ಗಂಗಾಧರ ಅಜ್ಜಯ್ಯನ ಮೇಲೆ ನಂಬಿಕೆ ಇಟ್ಟು ಡಿ.ಕೆ.ಶಿವಕುಮಾರ್ ತಾಳ್ಮೆಯಿಂದ ಕಾದಿದ್ದರು. ಕೊನೆಗೂ ಪ್ರತಿಫಲ ಸಿಕ್ಕಿದೆ. ಸಿದ್ದರಾಮಯ್ಯ ಸ್ಥಾನ ಬಿಡುವ ಮುತ್ಸದ್ದಿತನ ಮೆರೆದಿದ್ದಾರೆ. ಅದನ್ನು ಮೆಚ್ಚಬೇಕು’ ಎಂದು ಹೇಳಿದರು.

‘ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಪ್ರಸಂಗವು ಪರಮಾತ್ಮನ ಕೊಡುಗೆ, ವೀರ ಗಂಗಾಧರ ಗುರುಗಳ ಆಶೀರ್ವಾದ ಕಾರಣ. ಅಧಿಕಾರವನ್ನು ಡಿ.ಕೆ.ಶಿವಕುಮಾರ್ ಅವರು ಒಳ್ಳೆಯ ರೀತಿಯಲ್ಲಿ ನಡೆಸಲಿ’ ಎಂದು ಆಶಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-51-2134874908

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.