ಚಿಕ್ಕಮಗಳೂರು: ವರನಟ ಡಾ.ರಾಜ್ಕುಮಾರ್ ಅವರ 98ನೇ ಜನ್ಮ ದಿನಾಚರಣೆ ಏ. 24ರಂದು ಸಂಜೆ 5ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕರು ಹಾಗೂ ಕನ್ನಡಪರ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೇರುನಟ ಡಾ. ರಾಜ್ಕುಮಾರ್ ಅವರ ಜನ್ಮ ದಿನವನ್ನು ವ್ಯವಸ್ಥಿತವಾಗಿ ಅವರ ಚಲನಚಿತ್ರ ಗೀತೆಗಳ ಗಾಯನದ ಮೂಲಕ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಡಾ.ರಾಜ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್, ಡಿವೈಎಸ್ಪಿ ನಾಗರಾಜ್, ಡಾ.ರಾಜ್ಕುಮಾರ್ ಸಂಘದ ಓಂಕಾರೇಗೌಡ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರಾದ ಅನಿಲ್ಕುಮಾರ್, ಲಕ್ಷ್ಮಣ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-126-1470586558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.