ಚಿಕ್ಕಮಗಳೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್ಐಆರ್) ನಡೆಸಲಾಗುತ್ತಿದ್ದು, ಯಶಸ್ವಿಗೊಳಿಸಲು ಎಲ್ಲ ರಾಜಕೀಯ ಪಕ್ಷಗಳು ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಮನವಿ ಮಾಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್ಐಆರ್ ಪ್ರಕ್ರಿಯೆ ಪಾರದರ್ಶಕವಾಗಿದ್ದು, ಅರ್ಹ ಮತದಾರರನ್ನು ಮತಪಟ್ಟಿಗೆ ಸೇರಿಸುವುದು ಇದರ ಉದ್ದೇಶ. ಅನರ್ಹರನ್ನು ನಿಯಮಾನುಸಾರ ಕೈಬಿಡಲಾಗುತ್ತದೆ. ಸುಳ್ಳು ಮಾಹಿತಿ ಹಾಗೂ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಎಸ್ಐಆರ್ ಕಾರ್ಯವು ಅತ್ಯಂತ ಎಚ್ಚರಿಕೆಯಿಂದ ನಡೆಯುತ್ತಿದೆ ಎಂದರು.

ಕುಟುಂಬದ ಮುಖ್ಯಸ್ಥರ ಹೆಸರು 2002ರ ಪಟ್ಟಿಯಲ್ಲಿದ್ದರೆ, ಹೊಸದಾಗಿ ಅರ್ಹತೆ ಪಡೆಯುವ ಕುಟುಂಬದ ಇತರ ಸದಸ್ಯರ ಹೆಸರುಗಳನ್ನು ಸೇರ್ಪಡೆ ಮಾಡುವುದು ಸುಲಭವಾಗುತ್ತದೆ. ಮದುವೆಯಾಗಿ ಅಥವಾ ವಲಸೆ ಬಂದು ಇಲ್ಲಿ ನೆಲೆಸಿದವರ ಹೆಸರು ಹಳೆಯ ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ ಅವರಿಗೆ ಫ್ಯಾಮಿಲಿ ಲಿಂಕೇಜ್ ಸಿಗುವುದಿಲ್ಲ ಎಂದು ಹೇಳಿದರು.

ಈ ಹಿಂದೆ ಅವರು ವಾಸವಾಗಿದ್ದ ಸ್ಥಳದಲ್ಲಿನ ಮತದಾರರ ಪಟ್ಟಿಯಲ್ಲಿ ಆ ಮಾಹಿತಿ ಲಭ್ಯವಿದ್ದಲ್ಲಿ ಹೆಸರು ಸೇರ್ಪಡೆ ಮಾಡಬಹುದು. ಜಿಲ್ಲೆಯಲ್ಲಿ ಶೇ 74.89ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಿದ್ದು, ಮ್ಯಾಪಿಂಗ್ ಆಗದಿದ್ದವರು ಆಯೋಗ ನಿಗದಿಪಡಿಸಿದ ದಾಖಲೆ ನೀಡಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು ಎಂದು ವಿವರಿಸಿದರು.

ಹೊರಗಿನಿಂದ ಬಂದಿರುವ ಉದ್ಯೋಗಿಗಳು, ವಲಸಿಗರು ಹಾಗೂ ಮದುವೆಯಾಗಿ ಬಂದಿರುವ ಹೊಸ ಮತದಾರರನ್ನು ಗುರುತಿಸಲಾಗುವುದು. ಭಾರತದ ನಾಗರಿಕರೆಂದು ದೃಢೀಕರಿಸುವ ಒಂದು ದಾಖಲೆ ಪಡೆದು ಪಟ್ಟಿಗೆ ಸೇರಿಸಲಾಗುವುದು ಎಂದರು.

ರಾಜಕೀಯ ಪಕ್ಷಗಳು ಎಲ್ಲ ಬೂತ್ಗಳಲ್ಲೂ ಬೂತ್ ಮಟ್ಟದ ಏಜೆಂಟರನ್ನು ನೇಮಿಸಬೇಕು. ಅವರಿಗೆ ಎಸ್ಐಆರ್ ಕುರಿತು ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-126-1969769776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.