ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಏಜೆಂಟರ ಪಾತ್ರ ಬಹಳ ಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಎಸ್ಐಆರ್ ಮ್ಯಾಪಿಂಗ್ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ದೇಶದಾದ್ಯಂತ ಚುನಾವಣಾ ಆಯೋಗ ಮ್ಯಾಪಿಂಗ್ ಕಾರ್ಯ ಆರಂಭಿಸಿದೆ. ಕರ್ನಾಟಕದಲ್ಲಿ ಯಾವುದೇ ಮತದಾರರಿಗೂ ಅನ್ಯಾಯವಾಗದಂತೆ ಮ್ಯಾಪಿಂಗ್ ಮಾಡಿಸಬೇಕು ಎಂದರು.

ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಹಾಗೂ ಮುಖ್ಯವಾಗಿ ಬೂತ್ ಏಜೆಂಟರು ಮತಗಟ್ಟೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮತದಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಪ್ರತಿಯೊಂದು ಮತವೂ ಮೌಲ್ಯಯುತವಾಗಿದ್ದು, ಕಾಂಗ್ರೆಸ್ ಸಾಂಪ್ರದಾಯಿಕ ಮತಗಳು ಇದರಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ಶಾಸಕರೂ ಸೇರಿ ಎಲ್ಲರ ಮೇಲಿದೆ ಎಂದರು.

ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ಮತ ಪರಿಷ್ಕರಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಅಕ್ರಮವನ್ನು ಗಮನದಲ್ಲಿ ಇಟ್ಟುಕೊಂಡು ಎಚ್ಚೆತ್ತುಕೊಳ್ಳುವ ಅನಿವಾರ್ಯತೆ ಇದೆ ಎಂದು ಹೇಳಿದರು.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷ ಸಂಘಟನೆಯನ್ನು ಗಂಭೀರ ವಾಗಿ ಪರಿಗಣಿಸಿದ್ದಾರೆ. ಆದ್ದರಿಂದ ಎಲ್ಲರೂ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡೋಣ’ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ. ಅಂಶುಮಂತ್ ಮಾತನಾಡಿ, ‘ಮತದಾರರ ಪಟ್ಟಿ ಪರಿಷ್ಕರಣೆ ಬಹಳ ಗಂಭೀರವಾದ ವಿಷಯವಾಗಿದೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಬೂತ್ ಮಟ್ಟದ ಏಜೆಂಟರು ಕಾಳಜಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್. ಮೂರ್ತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ, ಮುಖಂಡರಾದ ಸವಿತಾ ರಮೇಶ್, ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್, ಎಸ್.ಸಿ ಘಟಕ ಅಧ್ಯಕ್ಷ ಮಲ್ಲೇಶಸ್ವಾಮಿ, ತರೀಕೆರೆ ಬ್ಲಾಕ್ ಅಧ್ಯಕ್ಷ ಫಾರೂಕ್, ಮೂಡಿಗೆರೆ ಬ್ಲಾಕ್ ಅಧ್ಯಕ್ಷ ಸುರೇಂದ್ರ, ಕಡೂರು ಬ್ಲಾಕ್ ಅಧ್ಯಕ್ಷ ಬಾಸೂರು ಚಂದ್ರಮೌಳಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-126-1085245569

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.