ಸೂಸಲವಾನಿ (ನರಸಿಂಹರಾಜಪುರ): ತಾಲ್ಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಸಲವಾನಿ ಗ್ರಾಮದ ಬಕ್ರಿಹಳ್ಳ ಏತನೀರಾವರಿ ಯೋಜನೆಯ ಸಮೀಪದ ತೋಟಕ್ಕೆ ಬುಧವಾರ ರಾತ್ರಿ ಒಂಟಿ ಸಲಗ ದಾಳಿ ಮಾಡಿದ್ದು, ತೆಂಗು ಮತ್ತು ಬಾಳೆ ಬೆಳೆ ನಾಶ ಮಾಡಿದೆ.

ಸೂಸಲವಾನಿ ಗ್ರಾಮದ ಕೆ.ಕೆ.ಸುನಿ ಎಂಬುವರ ತೋಟಕ್ಕೆ ದಾಳಿ ಮಾಡಿದ ಒಂಟಿ ಸಲಗ 7 ತೆಂಗಿನ ಮರಗಳಿಗೆ ಹಾನಿ ಮಾಡಿದೆ. ಹಲವು ಬಾಳೆ ಗೀಡಗಳನ್ನು ನಾಶ ಮಾಡಿದೆ. ಹಲವು ದಿನಗಳಿಂದ ಒಂಟಿ ಸಲಗ ಈ ವ್ಯಾಪ್ತಿಯ ಗ್ರಾಮಗಳಲ್ಲಿ ತೋಟಕ್ಕೆ ನುಗ್ಗಿ ಬೆಳೆ ನಾಶ ಮಾಡುತ್ತಿದೆ. ಉಪಟಳ ನೀಡುತ್ತಿರುವ ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಗ್ರಾಮಸ್ಥರ ಸಹಾಯದಿಂದ ಅರಣ್ಯಕ್ಕೆ ಓಡಿಸಿದ್ದಾರೆ.

ಭದ್ರಾಹಿನ್ನೀರು ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಸುಮಾರು 22ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-126-72945838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.