ಮೂಡಿಗೆರೆ: ರೈತರ ಜೊತೆ ವಿರೋಧ ಕಟ್ಟಿಕೊಂಡು, ರೈತ ವಿರೋಧಿ ಕಾನೂನು ತರುವ ಸರ್ಕಾರಗಳು ಚರಿತ್ರೆಯಲ್ಲೇ ಉಳಿದಿಲ್ಲ ಎಂದು ಹೈಕೋರ್ಟ್ ವಕೀಲ ಎಂ. ಶಿವಪ್ರಸಾದ್ ಹೇಳಿದರು.

ಪಟ್ಟಣದ ರೈತ ಭವನದಲ್ಲಿ ‘ನಮ್ಮ ಭೂಮಿ ಹಾಗೂ ಹಕ್ಕಿಗಾಗಿ’ ಸಮಿತಿಯಿಂದ ಏರ್ಪಡಿಸಿದ್ದ ರೈತ ಸಮಾವೇಶದಲ್ಲಿ ಅವರು ಶನಿವಾರ ಮಾತನಾಡಿದರು.

‘ಅಕ್ರಮ–ಸಕ್ರಮ ಸಮಿತಿಯಡಿ ಮಂಜೂರಾದ ರೈತರ ಭೂಮಿಯ ಬಗ್ಗೆ 3 ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ತನಿಖಾ ತಂಡವೊಂದನ್ನು ಕಂದಾಯ ಕಾರ್ಯದರ್ಶಿಯವರು ನೇಮಿಸಿದ್ದರು. ಅದರ ವರದಿಯನ್ನು ಜಿಲ್ಲಾಧಿಕಾರಿ ಸರ್ಕಾರಕ್ಕೆ ಕಳುಹಿಸಬೇಕಿತ್ತು. ಆ ವರದಿ ಆಧಾರದ ಮೇರೆಗೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಅಧಿಕಾರಿಗಳು ಏಕಾಏಕಿ ಅರ್ಜಿಗಳನ್ನೇ ವಜಾ ಮಾಡಿರುವುದು ತಪ್ಪು. ಇದರಿಂದ 10, 15 ಗುಂಟೆ ಜಮೀನು ಹೊಂದಿರುವ ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗದ ಸಣ್ಣ ರೈತರಿಗೆ ಹೆಚ್ಚಾಗಿ ತೊಂದರೆಯಾಗಿದೆ. ಈ ಬಗ್ಗೆ ಸ್ಥಳೀಯ ಶಾಸಕರು ಮಧ್ಯ ಪ್ರವೇಶಿಸಿ, ರೈತರ ಸಮಸ್ಯೆ ಬಗೆಹರಿಸಿದ್ದರೆ ಕಾನೂನು ಸಮರ ಅಗತ್ಯವಿರಲಿಲ್ಲ’ ಎಂದು ಹೇಳಿದರು.

ಹಿರಿಯ ವಕೀಲ ಎಚ್.ಎಂ. ಪ್ರಸಾದ್ ಮಾತನಾಡಿ, ‘ಅಕ್ರಮವನ್ನು ಸಕ್ರಮ ಮಾಡಿದ್ದು, ಸಕ್ರಮವನ್ನು ಅಕ್ರಮವೆಂದು ಹೇಳುತ್ತಿರುವುದು, ತನಿಖೆ ಮಾಡಿರುವುದು, ನಂತರ ಅರ್ಜಿ ವಜಾ ಮಾಡಿರುವುದು ಸರ್ಕಾರದ ಅಧಿಕಾರಿಗಳು. ಇಲ್ಲಿ ರೈತರ ತಪ್ಪೇನಿದೆ. ಅಧಿಕಾರಿಗಳು ಮಾಡಿರುವ ತಪ್ಪಿನಿಂದ ರೈತರು ಬೀದಿಗೆ ಬರುವ ಸ್ಥಿತಿ ಎದುರಾಗಿದೆ. ಅಧಿಕಾರಿಗಳು ಮಾಡಿರುವ ತಪ್ಪನ್ನು ಈಗ ಸರ್ಕಾರವೇ ಬಗೆಹರಿಸಬೇಕು. ಇದಕ್ಕಾಗಿ ನ್ಯಾಯಾಲಯದವರೆಗೆ ಬರುವ ಅವಶ್ಯಕತೆ ಇರಲಿಲ್ಲ. ರೈತರಿಗೆ ತೊಂದರೆ ಕೊಡುವ ಜನಪ್ರತಿನಿಧಿಗಳು ಮತ್ತೆ ಜನಪ್ರತಿನಿಧಿಗಳಾಗಲು ಅವಕಾಶ ಕೊಡಬಾರದು’ ಎಂದು ಹೇಳಿದರು.

ಮಾಜಿ ಶಾಸಕ ವೈ.ಎಸ್.ವಿ. ದತ್ತ, ‘ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದ್ದರಿಂದ ಸಾವಿರಾರು ರೈತರಿಗೆ ಪುನರ್ಜೀವನ ಸಿಕ್ಕಿದಂತಾಗಿದೆ. ಆದರೆ, ಇದು ತಾತ್ಕಾಲಿಕ ಪರಿಹಾರವಷ್ಟೇ. ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ರೈತರ ನೆರವಿಗೆ ಬರಬೇಕಾಗಿದೆ. ಅದಕ್ಕಾಗಿ ಬಿ.ಎಲ್. ಶಂಕರ್ ಅವರು ನಮ್ಮ ಹಕ್ಕೊತ್ತಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಬೇಕು. ಜತೆಗೆ ರೈತರ ನಿಯೋಗ ಕರೆದೊಯ್ದು ರೈತರ ಸಮಸ್ಯೆ ಬಗೆಹರಿಸಬೇಕು’ ಎಂದು ಮನವಿ ಮಾಡಿದರು.

ಮಾಜಿ ಸಭಾಪತಿ ಬಿ.ಎಲ್. ಶಂಕರ್, ‘ಮಲೆನಾಡು ಭಾಗದ ರೈತರಿಗೆ ಹೋರಾಟದ ಮನಃಸ್ಥಿತಿ ಬಂದಿರುವುದು ಉತ್ತಮ ಬೆಳವಣಿಗೆ. ನಾನು ಸರ್ಕಾರದ ಯಾವುದೇ ಹುದ್ದೆಯಲ್ಲಿಲ್ಲ. ಆದರೂ ಓರ್ವ ರೈತನಾಗಿ, ಈ ಹೋರಾಟಕ್ಕೆ ಬೆಂಬಲ ನೀಡುವುದು ನನ್ನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ಬಗ್ಗೆ ಚರ್ಚಿಸಿ, ನಿಯೋಗ ಕರೆದೊಯ್ದು ಸಮಸ್ಯೆ ಬಗೆಹರಿಸಲು ಶ್ರಮಿಸುತ್ತೇನೆ’ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಎಚ್.ಎಚ್. ದೇವರಾಜ್, ‘ಕಾಡು ಪ್ರಾಣಿಗಳಿಂದ ಕಂಗೆಟ್ಟಿದ್ದ ರೈತರು, ಕೃಷಿ ಚಟುವಟಿಕೆಗೆ ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಎಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದರ ಜೊತೆಗೆ ಅಧಿಕಾರಿಗಳು ಮಾಡಿದ ತಪ್ಪಿನಿಂದ ರೈತರು ಭೂಮಿ ಕಳೆದುಕೊಂಡು, ಬದುಕು ಕಟ್ಟಿಕೊಳ್ಳಲು ಸಾಧ್ಯವಾಗದೇ ಆತಂಕದ ಸ್ಥಿತಿ ಉಂಟಾಗಿದೆ. ಇದನ್ನು ಶಾಸಕರ ಗಮನಕ್ಕೆ ತಂದರೆ, ರೈತರು ಪಾಳೇಗಾರಿಕೆ ಮಾಡುತ್ತಿದ್ದಾರೆ ಎಂದು ಹೇಳಿರುವುದು ಸರಿಯಲ್ಲ. ಅಲ್ಲದೇ ತಿಂಗಳಿಗೊಮ್ಮೆ ಮೋಜು ಮಸ್ತಿ ಮಾಡಲು ಇಲ್ಲಿಗೆ ಬರುತ್ತಿರುವ ಕಂದಾಯ ಕಾರ್ಯದರ್ಶಿಗಳು ಇನ್ನು ಮುಂದೆ ಇಲ್ಲಿಗೆ ಬಾರದಂತೆ ಸರ್ಕಾರಕ್ಕೆ ಎಚ್ಚರಿಸಬೇಕು’ ಎಂದು ಆಗ್ರಹಿಸಿದರು.

ಮುಂದಿನ ಹೋರಾಟದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಯಿತು. ವೇದಿಕೆಯ ಮುಖಂಡರು ಬಿ.ಎಲ್. ಶಂಕರ್ ಅವರಿಗೆ ಮನವಿ ಸಲ್ಲಿಸಿದರು. ಸಮಾವೇಶಕ್ಕೆ ಬಂದಿದ್ದ ಸಾವಿರಾರು ರೈತರು ವಕಾಲತ್ತು ಅರ್ಜಿಯನ್ನು ಹಿರಿಯ ವಕೀಲರಾದ ಎಂ. ಶಿವಪ್ರಸಾದ್, ಎಚ್.ಎಂ. ಪ್ರಸಾದ್ ಅವರಿಗೆ ನೀಡಿದರು.

ವೇದಿಕೆ ಅಧ್ಯಕ್ಷ ಬಿ.ಕೆ.ಲಕ್ಷ್ಮಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸುರೇಂದ್ರ ಹ್ಯಾರಗುಡ್ಡೆ, ಉಪಾಧ್ಯಕ್ಷರಾದ ಗಬ್ಬಳ್ಳಿ ಚಂದ್ರೇಗೌಡ, ಬಂಕೇನಹಳ್ಳಿ ಸುರೇಶ್, ಕಾರ್ಯದರ್ಶಿಯಾದ ನವೀನ್ ಮರೆಬೈಲ್, ಎಂ.ಕೆ. ರವಿ ಮಗ್ಗಲಮಕ್ಕಿ, ಮಂಜಪ್ಪಯ್ಯ ಕಳಸ, ರಾಧಾ ಸುಂದರೇಶ್, ಎಚ್.ಎಚ್. ದೇವರಾಜ್, ಬಿ.ಎಸ್. ಜಯರಾಂಗೌಡ, ಅಬ್ದುಲ್ ರೆಹಮಾನ್, ಅನಿಲ್ ಗುರುದೇವ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-126-482281879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.