ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆಯಾಗಿದ್ದಾರೆ ಎಂದು ಸಂಘದ ರಾಜ್ಯ ಸಮಿತಿ ಸದಸ್ಯ ಕೆ.ಕೆ. ಕೃಷ್ಣೇಗೌಡ ತಿಳಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷರಾಗಿ 2 ವರ್ಷ ಸುನಿಲ್ಕುಮಾರ್ ಕೆಲಸ ಮಾಡಿದ್ದಾರೆ. ಈಗ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ ರಾಮೇಗೌಡ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಹೇಳಿದರು.

ರಾಮೇಗೌಡ ಅವರು ರೈತ ಸಂಘದ ಸಕ್ರಿಯ ಕಾರ್ಯಾಧ್ಯಕ್ಷರಾಗಿದ್ದರು. ತಾಲ್ಲೂಕು ಸಮಿತಿಯಲ್ಲಿ ಕೆಲಸ ಮಾಡಿರುವ ಅನುಭವ ಇದೆ ಎಂದರು.

ಕೆ.ಕೆ. ರಾಮೇಗೌಡ, ಗೌರವ ಅಧ್ಯಕ್ಷ ಮಲ್ಲುಂಡಪ್ಪ, ಮುಖಂಡರಾದ ಲಕ್ಷ್ಮಣರಾಜ್, ನೀಲಕಂಠಪ್ಪ, ಹುಲಿಯಪ್ಪಗೌಡ, ಪರ್ವತೇಗೌಡ, ಕಾಂತರಾಜು, ಸುನಿಲಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-126-1693383507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.