ಚಿಕ್ಕಮಗಳೂರು: ಮೂಡಿಗೆರೆ ಮತ್ತು ಕಡೂರು ತಾಲ್ಲೂಕಿನ ಹಲವು ರೈತರ ಹಕ್ಕುಪತ್ರಗಳನ್ನು ಕಂದಾಯ ಅಧಿಕಾರಿಗಳು ಸುಳ್ಳು ಆರೋಪ ಮಾಡಿ ವಜಾ ಮಾಡಿದ್ದಾರೆ ಎಂದು ರೈತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಲಕ್ಷ್ಮಣ ಕುಮಾರ್ ಆರೋಪಿಸಿದರು.

ಮೂಡಿಗೆರೆ ತಾಲ್ಲೂಕಿನಲ್ಲಿ ಮೂರು ಸಾವಿರ ಹಾಗೂ ಕಡೂರು ತಾಲ್ಲೂಕಿನಲ್ಲಿ ಐದು ಸಾವಿರ ರೈತರ ಹಕ್ಕಪತ್ರಗಳನ್ನು ವಿನಾಕಾರಣ ವಜಾ ಮಾಡಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅನ್ಯಾಯವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳ ಆದೇಶಕ್ಕೆ ತಡೆ ದೊರೆತಿದೆ. ಬಹು ಮುಖ್ಯವಾಗಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೊರಡಿಸಿದ್ದ ಸರ್ಕಾರ ಆದೇಶಕ್ಕೂ ತಡೆಯಾಜ್ಞೆ ದೊರೆತಿದೆ ಎಂದರು.

ಈ ಹಿಂದೆಯೇ ರೈತರಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರ ನೀಡಲಾಗಿದ್ದು, ದಾಖಲೆಗಳು ಸರಿಯಿಲ್ಲ ಎಂದು ವಜಾ ಮಾಡಲಾಗುತ್ತಿದೆ. ಇದಕ್ಕೆ ಯಾರು ಹೊಣೆ. ಮೂಡಿಗೆರೆ ಮತ್ತು ಕಡೂರು ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ರೈತ ಹಿತರಕ್ಷಣಾ ವೇದಿಕೆ ಉಪಾಧ್ಯಕ್ಷ ಚಂದ್ರೇಗೌಡ, ಸುರೇಶ್ ಗೌಡ, ರವಿ, ಪ್ರಧಾನ ಕಾರ್ಯದರ್ಶಿ ಸುರೇಂದ್ರ, ಖಜಾಂಚಿ ರೆಹಮಾನ್, ಮುಖಂಡರಾದ ಗುರುದೇವ್ ಅನಿಲ್, ನವೀನ್ ಕುಮಾರ್, ಕಿರಣ್ ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-126-206493363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.