ಚಿಕ್ಕಮಗಳೂರು: ರಸಗೊಬ್ಬರ ದರ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡ ರೈತರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ. ಇದರಿಂದ ರೈತರಿಗೆ ಬಹಳ ತೊಂದರೆಯಾಗಿದೆ. ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ದರ ಹೆಚ್ಚಾಗಿದೆ. ಕೃಷಿಗೆ ಯಂತ್ರಗಳ ಬಳಕೆಯೇ ಕಷ್ಟವಾಗಿದೆ ಎಂದು ಹೇಳಿದರು.

ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ರೈತರು ಸಿದ್ಧತೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಜತೆಗೆ ರಸಗೊಬ್ಬರ ದರ ಏರಿಕೆ ಮಾಡಿರುವುದು ಆಘಾತ ಉಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಮಹೇಶ್ ಮಾತನಾಡಿ, ‘ಡಿಸೇಲ್ ಬೆಲೆ ನಿರಂತರವಾಗಿ ಏರಿಕೆ ಆಗುತ್ತಿರುವುದರಿಂದ ನೀರಾವರಿ ಪಂಪ್ಸೆಟ್ ಮತ್ತು ಬೆಳೆ ಸಾಗಾಣಿಕೆ ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಗಗನಕ್ಕೆ ಏರಿರುವುದು ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ’ ಎಂದರು.

ರಸಗೊಬ್ಬರ ಬೆಲೆಯನ್ನು ಕೂಡಲೇ ಕಡಿಮೆ ಮಾಡಬೇಕು. ಇಲ್ಲದಿದ್ದರೆ ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ಹೆಚ್ಚುವರಿ ಸಹಾಯಧನ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಅನುಕೂಲ ಆಗುವಂತೆ ರಿಯಾಯಿತಿ ದರದಲ್ಲಿ ರೈತರಿಗೆ ಡೀಸೆಲ್ ಒದಗಿಸಬೇಕು ಎಂದು ಆಗ್ರಹಿಸಿದರು.

ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ರಾಜ್ಯ ಮಹಿಳಾ ಉಪಾಧ್ಯಕ್ಷೆ ವನಶ್ರೀ, ಮುಖಂಡರಾದ ನಿರಂಜನಮೂರ್ತಿ, ದೇವರಾಜೇಗೌಡ, ಚಂದ್ರಶೇಖರ್, ಜಗದೀಶ್, ಬಸವರಾಜು, ಮಂಜಪ್ಪ, ಕುಮಾರನಾಯ್ಕ, ಸಿದ್ದೇಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-126-1303323498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.