ಚಿಕ್ಕಮಗಳೂರು: ‘ಜಾನಪದ ಎಂದರೆ ನಮ್ಮ ಹಿರಿಯರ ಜೀವನ’ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾ ಜಾನಪದ ಪರಿಷತ್ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಆರನೇ ಜಾನಪದ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನಮ್ಮ ಹಿರಿಯರ ನಡೆ ನುಡಿ, ಆಚಾರ ವಿಚಾರವೇ ಜಾನಪದ. ಜಾನಪದ ಉಳಿದು ಬೆಳೆಯಬೇಕೆಂದರೆ ಹೆತ್ತವರು ತಮ್ಮ ಮಕ್ಕಳಿಗೆ ಜಾನಪದ ಕಲಿಸಬೇಕು. ಶಾಲಾ– ಕಾಲೇಜುಗಳಲ್ಲಿ ಜಾನಪದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದರು.

ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ಮೋಟಮ್ಮ ಅವರು ಹಿರಿಯ ಜಾನಪದ ಕಲಾವಿದೆ. ರಾಜಕಾರಣಿ ಅಷ್ಟೇ ಅಲ್ಲ, ಅವರೊಬ್ಬ ಸಾಂಸ್ಕೃತಿಕ ರಾಯಭಾರಿ. ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿರುವುದು ಅಭಿನಂದನಾರ್ಹ’ ಎಂದರು.

ಜಾನಪದ ಕೇವಲ ಕಲೆಯಲ್ಲ, ಅದು ಜೀವನ ಕ್ರಮ. ರೈತರು ಮತ್ತು ಗ್ರಾಮೀಣ ಮಹಿಳೆಯರಿಂದ ಬೆಳೆದು ಬಂದಿರುವ ಜಾನಪದವನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಜಾನಪದವನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು ಎಂದು ಹೇಳಿದರು.

ಜಾನಪದ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಗೇಗೌಡ ಮಾತನಾಡಿ, ‘ಇಡೀ ದೇಶದಲ್ಲಿ ಅತ್ಯಂತ ಹೆಚ್ಚು ಜಾನಪದ ಕಲೆ ಹೊಂದಿರುವ ರಾಜ್ಯ ನಮ್ಮದು. ಇಲ್ಲಿ 184 ಪ್ರಕಾರದ ಜಾನಪದ ಕಲೆಗಳಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ರೀತಿಯ ಜಾನಪದ ಕಲೆಗಳಿವೆ’ ಎಂದು ತಿಳಿಸಿದರು.

ಜಾನಪದ ಪರಿಷತ್ 49 ವರ್ಷಗಳಿಂದ ದೇಶ ವಿದೇಶಗಳಲ್ಲಿ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಬೆಳೆಸುವ ಕೆಲಸ ಮಾಡುತ್ತಿದೆ. ಆದರೂ, ಜಾನಪದ ಕಲಾವಿದರನ್ನು ಎರಡನೇ ದರ್ಜೆಯ ಕಲಾವಿದರಂತೆ ನಡೆಸಿಕೊಳ್ಳುತ್ತಿರುವುದು ವಿಷಾದನೀಯ. ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಯಬೇಕು’ ಎಂದರು.

ಗ್ರಾಮೀಣ ಜಾನಪದ ಕಲಾವಿದರಿಗೆ ಕಲಾ ಪ್ರದರ್ಶನಕ್ಕೆ ನಗರಗಳಲ್ಲಿ ವೇದಿಕೆ ಕಲ್ಪಿಸಬೇಕು. ಮಾಸಾಶನ ನೀಡಬೇಕು ಎಂದರು.

ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಜಿ.ಬಿ.ಸುರೇಶ್ ಮಾತನಾಡಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಲು ಹೋಬಳಿ, ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ನೂರಕ್ಕೂ ಹೆಚ್ಚು ಜಾನಪದ ಸಮ್ಮೇಳನವನ್ನು ಹಾಗೂ 120ಕ್ಕೂ ಹೆಚ್ಚು ಜಾನಪದ ಕಾರ್ಯಕ್ರಮ ಮತ್ತು ತರಬೇತಿ ಶಿಬಿರಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.

ಪರಿಷತ್ತಿನ ಗೌರವಾಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಜಗತ್ತಿನ ಎಲ್ಲ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಮೂಲಬೇರು ಜಾನಪದ. ಈ ನಿಟ್ಟಿನಲ್ಲಿ ಜಾನಪದವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು ಎಂದು ಹೇಳಿದರು.

ಜಾನಪದ ಸಿರಿ ಸ್ಮರಣಿಕೆಯನ್ನು ಬಿಡುಗಡೆಗೊಳಿಸಲಾಯಿತು. ಆಶ್ರಯ ಫೌಂಡೇಶನ್ ಸಂಸ್ಥಾಪಕಿ ವರ್ಷಾ, ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಲೋಕೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಹಿರಿಯ ವೀರಗಾಸೆ ಕಲಾವಿದ ಮಾಳೇನಹಳ್ಳಿ ಬಸಪ್ಪ, ವಿನಾಯಕ್ ಸಿಂದಿಗೆರೆ, ಉದ್ಯಮಿ ನಂಜೇಶ್ ಬೆಣ್ಣೂರು, ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಎನ್.ಕುಮಾರ್, ಪರಿಷತ್ತಿನ ತಾಲ್ಲೂಕು ಘಟಕದ ಗೌರವಾಧ್ಯಕ್ಷೆ ಸುಮಾ ಪ್ರಸಾದ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-126-2101449982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.