ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಪಾದಚಾರಿ ಮಾರ್ಗವನ್ನು ಅತಿಕ್ರಮಿಸದಂತೆ ಬಣಕಲ್ ಪೊಲೀಸ್ ಠಾಣೆ ಪಿಎಸ್ಐ ದಿಲೀಪ್ ಕುಮಾರ್ ಸೂಚಿಸಿದರು.

ಕೊಟ್ಟಿಗೆಹಾರದಲ್ಲಿ ಬಣಕಲ್ ಪೊಲೀಸರು ಗುರುವಾರ ನಡೆಸಿದ ವಿಶೇಷ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

ಕೊಟ್ಟಿಗೆಹಾರವು ಪ್ರವಾಸಿ ತಾಣಗಳಿಗೆ ಹಾಗೂ ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೇಂದ್ರವಾಗಿದ್ದು, ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಯಾವುದೇ ಚಟುವಟಿಕೆ ನಡೆಸಬಾರದು. ಹೋಟೆಲ್ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ರಸ್ತೆಬದಿಯಲ್ಲಿ, ಪಾದಚಾರಿ ಮಾರ್ಗಗಳಲ್ಲಿ ಕಸ ಹಾಕಬಾರದು. ಪಾದಚಾರಿ ಮಾರ್ಗವನ್ನು ಅತಿಕ್ರಮಿಸಬಾರದು. ಪ್ರವಾಸಿಗರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಎಂದು ಅವರು ಸೂಚಿಸಿದರು.

ಅಂಗಡಿ, ಹೋಟೆಲ್ಗಳಲ್ಲಿ ತೆರೆದ ಜಾಗಗಳಲ್ಲಿ ತಿನಿಸುಗಳನ್ನು ಇಡಬಾರದು. ಶುಚಿತ್ವ ಕಾಪಾಡಿಕೊಳ್ಳಬೇಕು ಎಂದರು.

ಬಣಕಲ್ ಠಾಣೆಯ ಪೊಲೀಸರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-126-1576123776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.