ಚಿಕ್ಕಮಗಳೂರು: ಅರಣ್ಯ, ಪರಿಭಾವಿತ ಅರಣ್ಯ ಸಮಸ್ಯೆ ಪರಿಹರಿಸಲು ಜಿಲ್ಲಾಡಳಿತ ನೇಮಿಸಿರುವ ಸರ್ವೆ ಅಧಿಕಾರಿಗಳು ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ನಾಗರಿಕ ಮತ್ತು ಹೋರಾಟ ಸಮಿತಿ ಅಧ್ಯಕ್ಷ ಎಸ್. ವಿಜಯಕುಮಾರ್ ಒತ್ತಾಯಿಸಿದರು.

ಕರ್ನಾಟಕ ಬೆಳೆಗಾರರ ಸಂಘ ಹಾಗೂ ಇತರೆ ಸಂಘಟನೆಗಳ ಹೋರಾ ಟದ ಫಲವಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಈ ತಂಡ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಆಗ್ರಹಿಸಿದರು.

ಅರಣ್ಯ ಕಾಯ್ದೆಯ ಸೆಕ್ಷನ್ 4 ಜಾರಿಗೊಳಿಸಿ ಅರಣ್ಯ ಇಲಾಖೆ ರೈತರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಅಂತಿಮಗೊಳಿಸಲು ನೇಮಿಸಿರುವ ಎಫ್ಎಸ್ಒ(ಅರಣ್ಯ ವ್ಯವಸ್ಥಾಪನಾ ಅಧಿಕಾರಿ) ಅವರ ಅವಧಿ ಮೀರುತ್ತಿದ್ದು, ಬಾಕಿ ಇರುವ ಪ್ರಕರಣಗಳನ್ನು ಅಂತಿಮಗೊಳಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ಮಹತ್ವಾಕಾಂಕ್ಷೆಯ ಪೋಡಿ ಯೋಜನೆಗೆ ಚಿಕ್ಕಮಗಳೂರು ಡಿಎಫ್ಒ ಕಚೇರಿ ಅಡ್ಡಿಯಾಗಿದೆ. ಸುಮಾರು 840 ಸರ್ವೆ ನಂಬರಿನ ಸಾವಿರಾರು ರೈತರಿಗೆ ಸಂಬಂಧಿಸಿದ ಕಡತಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆ ಎನ್ಒಸಿ ಕೇಳಿ ಕಳುಹಿಸಿರುವ ಕಡತಗಳನ್ನು ಕೂಡಲೇ ವಿಲೇವಾರಿ ಮಾಡಬೇಕು ಮನವಿ ಮಾಡಿದರು.

ನಮೂನೆ 53, 55, 57ಕ್ಕೆ ಸಂಬಂ ಧಿಸಿದ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ಅರ್ಹರಿಗೆ ಭೂಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿದರು.

ಮುಖಂಡ ಕೆರೆಮಕ್ಕಿ ಮಹೇಶ್ ಮಾತನಾಡಿ, ‘ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ಘೋಷಣೆಗೆ ಈ ಹಿಂದೆ ಹೋರಾಟಗಾರರು ಮತ್ತು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿತ್ತು. ಗ್ರಾಮ ಪಂಚಾಯಿತಿಗಳ ಸಭೆಯಲ್ಲಿ ನಿರ್ಣಯಿಸಿದಂತೆ ಗ್ರಾಮಸ್ಥರು, ಹೋರಾಟಗಾರರು ಮತ್ತು ಚುನಾಯಿತ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯ ನಿರ್ಣಯದಂತೆ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದರು.

ಸಮಿತಿಯ ಮುಖಂಡ ಮೈಲಿಮನೆ ಪೂರ್ಣೇಶ್ ಮಾತನಾಡಿ, ‘ಜಿಲ್ಲಾ ಕೇಂದ್ರ ದಲ್ಲಿ ಮೂರು ತಿಂಗಳಿಂದ ಖಾಯಂ ಉಪವಿಭಾಗಾಧಿಕಾರಿ ಇಲ್ಲ. ಇದರಿಂದ ಕಡತ ವಿಲೇವಾರಿ ವಿಳಂಬವಾಗುತ್ತಿದೆ. ಇದರಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು’ ಆಗ್ರಹಿಸಿದರು.

ಸಮಿತಿಯ ಮುಖಂಡರಾದ ಕುಮಾರ್, ರವಿಕುಮಾರ್, ಈಶ್ವರ್, ಶಾಂತಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-126-790186456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.