ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು.

ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ (ಆಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ ವತಿಯಿಂದ ಓಂಕಾರೇಶ್ವರ ದೇವಸ್ಥಾನದ ಆವರಣದಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು. ಇದಲ್ಲದೇ ಎಲ್ಲಾ ಬಡಾವಣೆ, ಗಲ್ಲಿಗಳಲ್ಲೂ ಮೂರ್ತಿಗಳು ಪ್ರತಿಷ್ಠಾಪನೆಗೊಂಡಿವೆ.

ವಿಜಯಪುರ, ಹಿರೇಮಗಳೂರು, ಕೋಟೆ, ರಾಮನಹಳ್ಳಿ, ದಂಟರಮಕ್ಕಿ, ಜಯನಗರ, ಹೊಸಮನೆ, ಉಂಡೇದಾಸರಹಳ್ಳಿ, ನೆಲ್ಲೂರು, ರಾಂಪುರ, ತೇಗೂರು ಮತ್ತಿತಡೆ ಗಣೇಶನ ದೊಡ್ಡ ಮೂರ್ತಿ ಪ್ರತಿಷ್ಠಾಪಿಪಿಸಲಾಗಿದೆ. ತಾಲೂಕಿನ ಮುಗುಳುವಳ್ಳಿಯಲ್ಲಿ ಗಣೇಶನ ಜತೆಗೆ ಗೌರಿಯನ್ನು ಅರಿಶಿನದಿಂದಲೇ ತಯಾರಿಸಿ ಪೂಜಿಸಲಾಗುತ್ತಿದೆ.

ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸುವ ಮೊದಲು ನಗರದಲ್ಲಿ ಮೆರವಣಿಗೆ ನಡೆಸಲಾಯಿತು. ಶಾಸಕ ಎಚ್.ಡಿ.ತಮ್ಮಯ್ಯ ಮೆರೆವಣಿಗೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ‘ಸಾರ್ವಜನಿಕ ಗಣಪತಿ ಉತ್ಸವದಲ್ಲಿ ಮುಂದಿನ 21 ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಎಲ್ಲ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಭಾಗವಗಿಸಬೇಕು’ ಎಂದರು.

ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಸಿ.ಎಸ್. ಕುಬೇರ, ಪ್ರಧಾನ ಕಾರ್ಯದರ್ಶಿ ಸಿ.ಆರ್.ಕೇಶವಮೂರ್ತಿ, ಈಶ್ವರಪ್ಪ ಕೋಟೆ, ವರಸಿದ್ದಿ ವೇಣುಗೋಪಾಲ್, ಎಂ.ಎಸ್. ಉಮೇಶಕುಮಾರ್, ಸಚಿನ್ ಇದ್ದರು.

ಹಿಂದೂ ಮಹಾಗಣಪತಿ ಸೇವಾ ಸಂಘದಿಂದ 12ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಬುಧವಾರ ಸಂಜೆ ನೂರಾರು ಭಕ್ತರು ಮೆರವಣಿಗೆಯಲ್ಲಿ ಸಾಗಿದರು. ಬಳಿಕ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ಸಂಘದ ಅಧ್ಯಕ್ಷ ಆಟೊ ಶಿವಣ್ಣ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು.

ನಗರದ ಗೌರಿಕಾಲುವೆ ಛಾಯಾಪುತ್ರ ಯುವಕರ ಸಂಘದ 22ನೇ ವರ್ಷದ ಗಣೇಶೋತ್ಸವದಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು. ಎಪಿಎಂಸಿ ಮಾರುಕಟ್ಟೆಯಲ್ಲಿನ ವಿನಾಯಕ ಸೇವಾ ಸಮಿತಿ ಮತ್ತು ತರಕಾರಿ ವರ್ತಕರ ಸಂಘದಿಂದ ನಾಲ್ಕನೇ ವರ್ಷದ ಗಣೇಶೋತ್ಸವದ ಅಂಗವಾಗಿ ಅಲಂಕೃತ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.