ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಜ್ಜಂಪುರ | ಬಾಲಕಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

Published : 19 ಸೆಪ್ಟೆಂಬರ್ 2024, 16:13 IST
Last Updated : 19 ಸೆಪ್ಟೆಂಬರ್ 2024, 16:13 IST
ಫಾಲೋ ಮಾಡಿ
Comments

ಅಜ್ಜಂಪುರ: ತಾಲ್ಲೂಕಿನ ಶಿವನಿ ಹೋಬಳಿಯ ಗ್ರಾಮವೊಂದರಲ್ಲಿ ಐದು ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿ ಗುರುವಾರ ಅಂಗನವಾಡಿಗೆ ಹೋಗಿರಲಿಲ್ಲ. ಪೋಷಕರು ಕೂಲಿ ಕೆಲಸಕ್ಕೆ ಹೋಗಿದ್ದರು. ವಾಪಸ್ ಬಂದು ನೋಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ಅಜ್ಜಂಪುರ ಪೊಲೀಸರು ಶ್ವಾನದಳದೊಂದಿಗೆ ಸ್ಥಳಕ್ಕೆ ಬಂದಿ ಪರಿಶೀಲನೆ ನಡೆಸಿದರು. ಬಾಲಕಿಯ ಕುತ್ತಿಗೆ ಬಿದಿಗು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿದ್ದು, ಹಲ್ಲಿನಿಂದ ಕಚ್ಚಿರುವ ರೀತಿಯ ಗುರುತುಗಳೂ ಇವೆ. ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT