ಚಿಕ್ಕಮಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕ ತಿಳಿಸಿದೆ.

ಸಂಘದ ಅಧ್ಯಕ್ಷ ಡಾ. ಡಿ.ಶ್ರೀನಿವಾಸ್ ನೇತೃತ್ವದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಅವರಿಗೆ ವೈದ್ಯರು ಬುಧವಾರ ಮನವಿ ಸಲ್ಲಿಸಿದರು.

ಇಲಾಖೆ ಅಧಿಕಾರಿ, ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳಿಗೆ ಹಲವು ಬಾರಿ ಗಮನ ಸೆಳೆದರೂ ಸೂಕ್ತ ಸ್ಪಂದನೆ ಸಿಕ್ಕದ ಕಾರಣ ಅನಿವಾರ್ಯವಾಗಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ವಿವಿಧ ವೃಂದಗಳಲ್ಲಿ ಒಟ್ಟು 36,397 ಅಧಿಕಾರಿ, ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ವಯೋನಿವೃತ್ತಿ ಮತ್ತು ಇತರ ಕಾರಣಗಳಿಂದ ನೌಕರರ ಸಂಖ್ಯೆ ಕಡಿಮೆಯಾಗುತ್ತಿದೆ. ಖಾಲಿ ಹುದ್ದೆಗಳು ಭರ್ತಿಯಾಗದೆ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಆದ್ದರಿಂದ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದರು.

ಮೊದಲ ಹಂತದಲ್ಲಿ ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಎಲ್ಲಾ ವೃಂದದ ವೈದ್ಯರು, ಅಧಿಕಾರಿ-ನೌಕರರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲಾಗುವುದು. ಹೊರರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸಲಾಗುವುದು ಎಂದು ತಿಳಿಸಿದರು.

ಎರಡನೇ ಹಂತದಲ್ಲಿ ಮಾರ್ಚ್ 16ರಿಂದ ಬೇಡಿಕೆ ಈಡೇರುವ ತನಕ ಕರ್ತವ್ಯಕ್ಕೆ ಗೈರಾಗುವ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆಶ್ವತ್ಥಬಾಬು, ಆರ್ಸಿಎಚ್ ಅಧಿಕಾರಿ ಎಚ್.ಕೆ. ಮಂಜುನಾಥ್, ಡಾ. ಪ್ರತ್ಯಕ್ಷ ಭೈರವ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.