ಚಿಕ್ಕಮಗಳೂರು: ಜಿಲ್ಲಾ ತೆರಿಗೆ ವೃತ್ತಿಪರರ ಸಂಘದ ವತಿಯಿಂದ ಜೂನ್ 4ರಂದು ಬೆಳಿಗ್ಗೆ 9.30ಕ್ಕೆ ಎಐಟಿ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ‘ಜಿಎಸ್ಟಿ ಮತ್ತು ಆದಾಯ ತೆರಿಗೆ’ ಕುರಿತು ಒಂದು ದಿನದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ತೆರಿಗೆ ವೃತ್ತಿಪರರ ಸಂಘದ ಅಧ್ಯಕ್ಷ ಕಿರಣ್ ಸೋಮಯ್ಯ ತಿಳಿಸಿದರು.

ವಿಚಾರ ಸಂಕಿರಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಕೆ.ಎಸ್.ಟಿ.ಪಿ.ಎ ಪ್ರಸಾದ್, ಎಐಟಿ ಕಾಲೇಜು ಪ್ರಾಂಶುಪಾಲರಾದ ಗೌತಮ್ ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ರಾಜೇಶ್, ಸಾಯಿ ರಕ್ಷಿತ್ ಉಪನ್ಯಾಸ ನೀಡಲಿದ್ದಾರೆ. ಇತ್ತೀಚೆಗೆ ಜಿಎಸ್ಟಿ ಹಾಗೂ ಆದಾಯ ತೆರಿಗೆಯಲ್ಲಿ ಆಗಿರುವ ಬದಲಾವಣೆಗಳ ಕುರಿತು ವಿಚಾರ ಸಂಕಿರಣದಲ್ಲಿ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ತೆರಿಗೆ ವೃತ್ತಿಪರರ ಸಂಘದ ಮಾಜಿ ಅಧ್ಯಕ್ಷ ಶಾಂತರಾಮ ಹೆಗ್ಡೆ, ಜಾವಿದ್, ಧರ್ಮಾಚಾರಿ, ರಂಜಿತ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-1781696334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.