ಚಿಕ್ಕಮಗಳೂರು: ಆರೋಗ್ಯ ಇಲಾಖೆಯ ಅಧಿಕಾರಿ, ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 11ರಿಂದ ಮೊದಲ ಹಂತದ ಮುಷ್ಕರ ಆರಂಭವಾಗಲಿದೆ ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶ್ರೀನಿವಾಸ ತಿಳಿಸಿದರು.

ಮಾರ್ಚ್ 11ರಿಂದ 15ರವರೆಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಾಗುವುದು. ಈ ಸಂದರ್ಭದಲ್ಲಿ ಹೊರ ರೋಗಿ ವಿಭಾಗದ ಸೇವೆ ನೀಡುವುದಿಲ್ಲ. ತುರ್ತು ಸೇವೆ ಮಾತ್ರ ಒದಗಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಹೇಳಿದರು.

ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರು ಮನವಿ ನೀಡುತ್ತಿದ್ದರೂ ಈವರೆಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದರು.

ವೃಂದ ಮತ್ತು ನೇಮಕಾತಿ ನಿಯಮಗಳನ್ನು ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು. ಆದರೆ, ತಿದ್ದುಪಡಿ ಮಾಡಿಲ್ಲ. ಜ್ಯೇಷ್ಠತಾ ಪಟ್ಟಿಯನ್ನು ಈವರೆಗೆ ಪ್ರಕಟಿಸಿಲ್ಲ. ಅಧಿಕಾರಿ ಮತ್ತು ನೌಕರರಿಗೆ ಐದು ವರ್ಷಗಳಿಂದ ಬಡ್ತಿ ನೀಡಿಲ್ಲ. ಉನ್ನತ ವ್ಯಾಸಂಗಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ದೂರಿದರು.

ಆರೋಗ್ಯ ಇಲಾಖೆಯಲ್ಲಿನ ವರ್ಗಾವಣೆ ಕಾಯ್ದೆಯ ನ್ಯೂನತೆ ಸರಿಪಡಿಸಿಲ್ಲ. ಅವೈಜ್ಞಾನಿಕವಾಗಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಉತ್ತಮ ಸೇವೆ ನೀಡುವ ದೃಷ್ಟಿಯಿಂದ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಇಲಾಖೆಯ ಕೆ.ಎಸ್. ವಸಂತಕುಮಾರಿ, ದೇವರಾಜು, ವೆಂಕಟೇಶ್, ಅನುಪಮಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.