ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ ರಾತ್ರಿಯೂ ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ ಮತ್ತು ತುಮಕೂರು ಜಿಲ್ಲೆಗಳಿಗೆ ವಿಶೇಷ ಮನ್ಸೂಚನೆಯನ್ನು ಇಲಾಖೆ ನೀಡಿದೆ. ಶನಿವಾರ ರಾತ್ರಿ 8.15ಕ್ಕೆ ಈ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮುಂದಿನ ಮೂರು ಗಂಟೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ದುರ್ಬಲ ಮರದ ಕೊಂಬೆಗಳು ಕಿತ್ತು ಬೀಳುವ ಸಾಧ್ಯತೆ ಇದೆ. ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಆಗಲಿವೆ. ಕಿಟಕಿ, ಬಾಗಿಲು ಮುಚ್ಚಿ ಮನೆಯೊಳಗೆ ಇರುವುದು, ಪ್ರಯಾಣ ತಪ್ಪಿಸುವುದು ಸೂಕ್ತ. ಮರಗಳ ಕೆಳಗೆ ಆಶ್ರಯ ಬೇಡ, ಮಳೆ ಮತ್ತು ಗಾಳಿಯ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್ಪ್ಲಗ್ ಮಾಡುವಂತೆ ಇಲಾಖೆ ಸಲಹೆ ನೀಡಿದೆ.

ಶುಕ್ರವಾರ ಮಧ್ಯರಾತ್ರಿ ಗುಡುಗು, ಸಿಡಿಲು, ಬಿರುಗಾಳಿ ಜತೆಗೆ ಸುರಿದ ಮಳೆಯಿಂದ ನಗರದಲ್ಲಿ ಮರಗಳು, ವಿದ್ಯುತ್ ಕಂಬಗಳು ಉರುಳಿ ಅವಾಂತರ ಸೃಷ್ಟಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.