ಚಿಕ್ಕಮಗಳೂರು: ಹಿಮೋಫಿಲಿಯಾ, ಥಲಸ್ಸೆಮಿಯಾ, ಸಿಕ್ಕಲ್ ಸೆಲ್ ಅನಿಮಿಯಾದಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಸ್ಪತ್ರೆಯ ರೋಗ ಶಾಸ್ತ್ರಜ್ಞ (ಪ್ಯಾಥಲಜಿಸ್ಟ್) ಡಾ. ಮಹಮದ್ ಅಪ್ರೋಜ್ ಸಲಹೆ ನೀಡಿದರು.

ನಗರದ ಜೀವಿತ ಫೌಂಡೇಷನ್, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ (ಡಿಡಿಆರ್ಸಿ), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರಕ್ತನಿಧಿ ಕೇಂದ್ರ, ಎಂ.ಆರ್.ಡಬ್ಲ್ಯು, ವಿ.ಆರ್.ಡಬ್ಲ್ಯು, ಯು.ಆರ್.ಡಬ್ಲ್ಯು ಸಹಯೋಗದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ, ವಿಶ್ವ ಥಲಸ್ಸೆಮಿಯಾ ದಿನವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಹಿಮೋಫಿಲಿಯಾ, ಥಲಸ್ಸೆಮಿಯಾ, ಸಿಕ್ಕಲ್ ಸೆಲ್ ಅನಿಮಿಯಾ ನ್ಯೂನತೆ ಬಗ್ಗೆ ಹಾಗೂ ಚಿಕಿತ್ಸೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಜಿಲ್ಲಾಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ತಿಳಿವಳಿಕೆ ನೀಡಿದರು.

ನಗರದ ಎಂ.ಆರ್.ಡಬ್ಲ್ಯು ಸಂಸ್ಥೆಯ ಮೋಹನ್ ಮಾತನಾಡಿ, ‘ಸರ್ಕಾರದಿಂದ ಸಿಗುವ ವಿಶೇಷ ಸೌಲಭ್ಯಗಳು ಕೆಲವೇ ವಿಧದ ಅಂಗವಿಕಲರಿಗೆ ಸೀಮಿತವಾಗದೆ, ಈ ರೀತಿಯ ನ್ಯೂನತೆ ಇರುವ ಪ್ರತಿಯೊಬ್ಬರಿಗೂ ಸಿಗುವಂತಾಗಬೇಕೆಂದು’ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜೀವಿತ ಫೌಂಡೇಷನ್ ಅಧ್ಯಕ್ಷ ಪ್ರಕಾಶ್ ಮಾತನಾಡಿ, ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಶೇ 5ರಷ್ಟು ಅನುದಾನವನ್ನು ರಕ್ತ ಸಂಬಂಧಿತ ನ್ಯೂನತೆಯಿಂದ ಬಳಲುತ್ತಿರುವವರಿಗೆ ಮೀಸಲಿಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಕ್ತ ಸಂಬಂಧಿತ ನ್ಯೂನತೆ ಇರುವ ಮಕ್ಕಳು, ಪೋಷಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-126-1295951385

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.