ಮೂಡಿಗೆರೆ: ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡುವ ಹಾಗೂ ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಹಿಂದೂ ಜನಜಾಗೃತಿ ವೇದಿಕೆಯ ಕಾರ್ಯಕರ್ತರು ಒತ್ತಾಯಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರವು ಶಿಕ್ಷಣದ ಮೂಲಕ ತಾರತಮ್ಯ ನೀತಿ ಅನುಸರಿಸುತ್ತಿದೆ. ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡಿ, ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರವು ಧಾರ್ಮಿಕ ತಾರತಮ್ಯವಾಗಿದೆ. ಈ ನಿರ್ಧಾರವು ಸಮಾನತೆ, ಧರ್ಮನಿರಪೇಕ್ಷತೆ ಹಾಗೂ ಏಕರೂಪದ ಸಮವಸ್ತ್ರ ನೀತಿಗೆ ವಿರುದ್ಧವಾಗಿದೆ. 2022ರಲ್ಲಿ ಉಡುಪಿಯಲ್ಲಿ ಆರಂಭ ವಾದ ಹಿಜಾಬ್ ವಿವಾದವು ರಾಜ್ಯದಾ ದ್ಯಂತ ವಿಸ್ತರಿಸಿತ್ತು. ಈ ಪ್ರಕರಣದ ಕುರಿತು ನ್ಯಾಯಾಲಯ ಶಾಲೆ-ಕಾಲೇಜುಗಳಲ್ಲಿ ನಿಗದಿತ ಸಮ ವಸ್ತ್ರವನ್ನು ಪಾಲಿಸಬೇಕೆಂದು ಸೂಚಿಸಿತ್ತು. ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾ ರಣೆಗೆ ಬಾಕಿಯಿದೆ. ಆದರೂ ಸರ್ಕಾರ ಹಿಜಾಬ್ಗೆ ಅವಕಾಶ ನೀಡಿ, ಕಾನೂನು ಉಲ್ಲಂಘಿಸಿದೆ ಎಂದು ದೂರಿದರು.

‘ಹಿಜಾಬ್ಗೆ ಅವಕಾಶ ನೀಡಿದರೆ ಇತರೆ ಸಮುದಾಯದ ವಿದ್ಯಾರ್ಥಿಗಳು ಸಹ ತಮ್ಮ ಧಾರ್ಮಿಕ ಚಿಹ್ನೆಗಳನ್ನು ಪ್ರದರ್ಶಿಸುವ ಸಾಧ್ಯತೆ ಇರುತ್ತದೆ. ಇದರಿಂದ ಶಿಕ್ಷಣದ ಮಹತ್ವ ಕಳೆದುಕೊಳ್ಳುತ್ತದೆ. ಹಾಗಾಗಿ ಹಿಜಾಬ್ಗೆ ಅವಕಾಶ ನೀಡಬಾರದು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಸಂಜಯ್ ಕೊಟ್ಟಿಗೆಹಾರ, ಬಸವರಾಜ್, ರಘು ಮೂಡಿಗೆರೆ, ಶರತ್ ಮಾಕೋನಹಳ್ಳಿ, ಧರ್ಮರಾಜ್ ಬಿನ್ನಡಿ ಮತ್ತಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-126-1596158959

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.