ಚಿಕ್ಕಮಗಳೂರು: ಹೊಯ್ಸಳ ಮತ್ತು ಚೋಳರ ಕಾಲದ ಪುರಾತನ ದೇವಾಲಯಗಳು, ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾದ ಜಿಲ್ಲೆಯ ಹೋರಾಟಗಾರರು ಹಾಗೂ ಜಿಲ್ಲೆಯ ಐತಿಹಾಸಿಕ ದಾಖಲೆಗಳ ಕುರಿತು ವಿದ್ಯಾರ್ಥಿಗಳು ಅರಿವು ಹೊಂದಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಆಯೋಜಿಸಿದ್ದ ‘ಚಿಕ್ಕಮಗಳೂರು ಇತಿಹಾಸ ದಾಖಲೆ’ ಕುರಿತ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಲೆನಾಡು ಹಾಗೂ ಬಯಲುಸೀಮೆಯನ್ನು ಒಳಗೊಂಡಿರುವ ಚಿಕ್ಕಮಗಳೂರು ಜಿಲ್ಲೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಜ್ಞಾನಾರ್ಜನೆ ಮಾಡಬೇಕು. ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳು ಅವರ ಬದುಕಿನ ಒಂದು ಭಾಗವಾಗಬೇಕು ಎಂದು ತಿಳಿಸಿದರು.

ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧಿ 1927ರ ಜನವರಿಯಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದರು. ಅದರ ಶತಮಾನೋತ್ಸವ ಹಿನ್ನೆಲೆ ಮುಂಬರುವ ಜನವರಿಯಲ್ಲಿ ಬೃಹತ್ ಮಟ್ಟದ ಕಾರ್ಯಕ್ರಮ ಹಾಗೂ ಜಾಥಾವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಹಾತ್ಮರ ಜೀವನ ಚರಿತ್ರೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದರು.

ಯುಗದ ಕವಿ ಕುವೆಂಪು ಅವರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಗ್ರಾಮದಲ್ಲಿ ಜನಿಸಿದ್ದು ಜಿಲ್ಲೆಯ ಹೆಮ್ಮೆ. ಜೊತೆಗೆ ಜಿಲ್ಲೆಯ ಕಾಫಿ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಬೆಳವಾಡಿ ಗ್ರಾಮದ ವೀರನಾರಾಯಣಸ್ವಾಮಿ ದೇವಸ್ಥಾನ, ಉದ್ಭವ ಗಣಪತಿ ಹಾಗೂ ಅಮೃತೇಶ್ವರ ದೇವಾಲಯಗಳು ಜಿಲ್ಲೆಯ ಐತಿಹಾಸಿಕ ವೈಭವವನ್ನು ಸಾರುತ್ತವೆ ಎಂದರು.

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಿರೇಮಗಳೂರಿನ ಕೋದಂಡ ರಾಮಚಂದ್ರಸ್ವಾಮಿ ದೇವಸ್ಥಾನ, ನಗರದ ಗೋಪಾಲಕೃಷ್ಣ ದೇವಸ್ಥಾನ ಹಾಗೂ ಮರ್ಲೆ ಗ್ರಾಮದ ಕಲ್ಲಿನ ಪುರಾತನ ದೇವಾಲಯಗಳು ಜಿಲ್ಲೆಯ ಸೊಬಗನ್ನು ಮತ್ತಷ್ಟು ಹೆಚ್ಚಿಸಿವೆ. ರಾಜ್ಯದಲ್ಲೇ ಅತಿ ಎತ್ತರದ ಶಿಖರವಾಗಿರುವ ಮುಳ್ಳಯ್ಯನಗಿರಿ ಜಿಲ್ಲೆಯ ಪ್ರಕೃತಿ ಸೌಂದರ್ಯಕ್ಕೆ ಮತ್ತಷ್ಟು ಮೆರುಗು ನೀಡಿದೆ ಎಂದು ಹೇಳಿದರು.

ಮನುಷ್ಯ ಉದ್ಯೋಗ ಅರಸಿ ದೇಶ–ವಿದೇಶಗಳಿಗೆ ತೆರಳಿದರೂ ತನ್ನ ಮೂಲವನ್ನು ಮರೆಯಬಾರದು. ತಾವು ಹುಟ್ಟಿ ಬೆಳೆದ ನೆಲದ ಮಹಿಮೆಯನ್ನು ಎಲ್ಲೆಡೆ ಪಸರಿಸಬೇಕು. ಭಾರತ ದೇಶ ಹಾಗೂ ತಾವು ಜನಿಸಿದ ನೆಲ ಪ್ರತಿಯೊಬ್ಬರಿಗೂ ಯೋಗ್ಯವಾದ ಬದುಕನ್ನು ನೀಡಬಲ್ಲದು ಎಂದು ತಿಳಿಸಿದರು.

ಪುರಾತತ್ವ ಇಲಾಖೆಯ ಎಎಸ್ಐ ಉಪ ಅಧೀಕ್ಷಕ ಎಚ್.ಆರ್. ದೇಸಾಯಿ ಮಾತನಾಡಿ, ಜಿಲ್ಲೆ ಪ್ರವಾಸೋದ್ಯಮದ ವಿವಿಧ ತಾಣಗಳನ್ನು ಹೊಂದಿದೆ. ಎತ್ತರದ ಬೆಟ್ಟಗಳು, ವೇಗವಾಗಿ ಹರಿಯುವ ನದಿಗಳು, ಧಾರ್ಮಿಕ ಕ್ಷೇತ್ರಗಳು, ವೈವಿಧ್ಯಮಯ ಪಕ್ಷಿಜೀವನ, ನಿತ್ಯಹರಿದ್ವರ್ಣ ಕಾಡುಗಳು ಹಾಗೂ ಜಾನಪದ ಸಂಸ್ಕೃತಿ ಜಿಲ್ಲೆಯ ವೈಶಿಷ್ಟ್ಯವನ್ನು ಪ್ರತಿಬಿಂಬಿಸುತ್ತವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಡಿಎಸ್ಜಿ ಕಾಲೇಜಿನ ಪ್ರಾಂಶುಪಾಲೆ ತಸ್ನೀಮ್ ಕೌಸರ್ ಮನಿಯಾರ್ ಮಾತನಾಡಿ, ರಾಜ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆ ತನ್ನದೇ ಆದ ವಿಶೇಷ ಸ್ಥಾನ ಹೊಂದಿದೆ. ಪೂರ್ವಿಕರ ಶಾಸನಗಳು ಹಾಗೂ ಹೊಯ್ಸಳರ ಕಾಲದ ಕಲ್ಲಿನ ಶಿಲ್ಪಗಳು ಜಿಲ್ಲೆಯ ಸಮಗ್ರ ಇತಿಹಾಸವನ್ನು ಪರಿಚಯಿಸುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಿಡಿಎ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಐಕ್ಯುಎಸ್ಸಿ ಸಂಯೋಜಕ ಗೋವರ್ಧನ್, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಉಪನಿರ್ದೇಶಕ ಎಚ್.ಎಲ್. ಮಂಜುನಾಥ್, ಕಾರ್ಯಕ್ರಮದ ಆಯೋಜಕ ಎಂ. ಲೋಕೇಶ್, ಹಂಪಿ ವಲಯದ ಉಪ ಅಧೀಕ್ಷಕ ಎಸ್.ಎಂ. ದೇವರಾಜ್ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥೆ ಪರ್ಜಾನ್ ಪರ್ವೀನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-126-1013633228

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.