ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಹೋಂಸ್ಟೇಗಳು ಸರ್ಕಾರದ ಆದೇಶದಂತೆ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಈ ಬಗ್ಗೆ ಹೋಂ ಸ್ಟೇ ಮಾಲಿಕರಿಗೆ ಕಾಲಾವಕಾಶ ನೀಡಿದ್ದರೂ ಹಲವು ಹೋಂಸ್ಟೇಗಳು ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿಲ್ಲ. ಹೋಟೆಲ್, ರೆಸಾರ್ಟ್, ಹೋಂಸ್ಟೇಗಳು ಅಗತ್ಯ ದಾಖಲಾತಿಗಳೊಂದಿಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೇ ಇಲಾಖೆಯಿಂದ ಅನುಮೋದನೆ ಪಡೆದು ಅವಧಿ ಮುಗಿದಿರುವ ಹೋಂಸ್ಟೇ ಮಾಲೀಕರೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಾರ್ಯಾಲಯಕ್ಕೆ ಭೇಟಿ ನೀಡಿ ನೋಂದಣಿಗೆ ಅವಶ್ಯಕವಿರುವ ಅಗತ್ಯ ದಾಖಲಾತಿಗಳ ಮಾಹಿತಿಯನ್ನು ಪಡೆದು, ಆ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಿ ಅನುಮೋದನೆ ಪಡೆಯಲು ಸೂಚಿಸಿದೆ. ಪರವಾನಗಿ ಅವಧಿ ಮುಗಿದ ಹೋಂಸ್ಟೇಗಳನ್ನು ಅನಧಿಕೃತ ಹೋಂಸ್ಟೇಗಳು ಎಂದು ಪರಿಗಣಿಸಲಾಗುವುದು. ಹೋಂಸ್ಟೇ ಯನ್ನು ನೋಂದಣಿ ಮಾಡಿಕೊಂಡು ಅನುಮೋದನೆ ಪಡೆಯದೆ ಇದ್ದರೆ ಅಂಥ ಹೋಂಸ್ಟೇಗಳ ವಿರುದ್ಧ ಕರ್ನಾಟಕ ಟೂರಿಸಂ ಟ್ರೇಡ್ (ಫೆಸಿಲಿಟೇಶನ್ ಅಂಡ್ ರೆಗ್ಯುಲೇಶನ್) ಆ್ಯಕ್ಟ್-2015ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-126-1741879522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.