ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯ ಭ್ರಷ್ಟಾಚಾರ ಮತ್ತು ಸಾರ್ವಜನಿಕ ಆರೋಗ್ಯ ಸೇವೆಯ ಹೆಸರಿನಲ್ಲಿ ನಡೆಯುತ್ತಿರುವ ದುರ್ಬಳಕೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಲೀಸಾ ಫೌಂಡೇಷನ್ ಪದಾಧಿಕಾರಿಗಳು ಶನಿವಾರ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಫೌಂಡೇಶನ್ ಸಂಸ್ಥಾಪಕಿ ಸಂಗೀತಾ ಪ್ರಸಾದ್, ಇತ್ತೀಚೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಸ್ಥಿತಿಗತಿಗಳನ್ನು ಗಮನಿಸಿದಾಗ, ಕೆಲವು ಸಣ್ಣಪುಟ್ಟ ಬದಲಾವಣೆಗಳು ಪ್ರಯತ್ನ ಕಂಡಿವೆ, ಹೊರತು ಮೂಲ ಸಮಸ್ಯೆಗಳು ಹಾಗೇ ಉಳಿದುಕೊಂಡಿವೆ ಎಂದು ಹೇಳಿದರು.

ರೋಗಿಗಳು ಮತ್ತು ಸಾರ್ವಜನಿಕರಿಂದ ಮೊಬೈಲ್ಗಳನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದು ಕಾನೂನು ಬಾಹಿರವಾಗಿದೆ. ಆಸ್ಪತ್ರೆಯ ಒಳಗಿನ ಅಸಮರ್ಪಕತೆಗಳನ್ನು ದಾಖಲಿಸಲು ಅವಕಾಶ ನೀಡದೇ ತಡೆಯಲಾಗುತ್ತಿದೆ. ಇದು ಭ್ರಷ್ಟಾಚಾರವನ್ನು ಮುಚ್ಚಿಡುವ ಪ್ರಯತ್ನವಾಗಿದೆ ಎಂದು ದೂರಿದರು.

ಕುಡಿಯುವ ನೀರು ಹಾಗೂ ಆಸ್ಪತ್ರೆಯ ಸ್ವಚ್ಛತೆ ಅತ್ಯಂತ ಕೆಟ್ಟ ಸ್ಥಿತಿಯಲ್ಲಿಯಿದೆ. ಇದು ರೋಗಿಗಳಿಗೆ ಹೊಸ ರೋಗಗಳ ಅಪಾಯವನ್ನುಂಟು ಮಾಡಲಿದೆ. ವಾರ್ಡ್ಗಳಿಗೆ ಆಹಾರ ತಲುಪಿಸುವ ವ್ಯವಸ್ಥೆಯಿಲ್ಲ. ಆಹಾರದಲ್ಲಿ ವಿಳಂಬ ಅಥವಾ ನಿರಾಕರಣೆ, ಮೂರು ಹೊತ್ತು ಬದಲು ಎರಡು ಹೊತ್ತು, ಪೌಷ್ಟಿಕಾಂಶಗಳ ಕೊರತೆಯಿದೆ. ಸರ್ಕಾರದ ಅನುದಾನವು ಇಲ್ಲಿ ದುರುಪ ಯೋಗವಾದ ಅನುಮಾನವಿದೆ ಎಂದರು.

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕಳುಹಿಸುವುದು. ಸರ್ಕಾರಿ ಸೇವೆಯಲ್ಲಿ ನಿರ್ಲಕ್ಷ್ಯ, ಖಾಸಗಿಯಲ್ಲಿ ಉತ್ತಮ ಸೇವೆ. ಶಸ್ತ್ರ ಚಿಕಿತ್ಸೆಗೆ ಲಕ್ಷದವರೆಗೆ ಹಣ ವಸೂಲಿಯಿಂದ ಬಡ ಜನರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಆರೋಪಿಸಿದರು. ಲೀಸಾ ಫೌಂಡೇಶನ್ ಪದಾಧಿಕಾರಿಗಳು, ಸದಸ್ಯರುಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-126-34582300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.