ತರೀಕೆರೆ: ಲಿಂಗದಹಳ್ಳಿ ಹೋಬಳಿಯ ಜಯಪುರ ಗ್ರಾಮದೇವತೆ ಶ್ರೀದುರ್ಗಾಂಬ ದೇವಿಯ 30ನೇ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್ ಮಾತನಾಡಿ, ‘ತಣಿಗೆಬೈಲು, ಹುಣಸೆಬೈಲು, ವರ್ತೆಗುಂಡಿ ಭಾಗದ ಗ್ರಾಮಗಳಲ್ಲಿ ಶಿವನ ದೇವಾಲಯಗಳಿದ್ದು, ಜಯಪುರ ಗ್ರಾಮದಲ್ಲಿ ಶಿವಸತಿಯಾದ ಶ್ರೀದುರ್ಗಾಪರಮೇಶ್ವರಿ ದೇವಾಲಯ ನಿರ್ಮಾಣ ಮಾಡಿರುವುದು ಸಂತಸ ತಂದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮಸ್ಥರು ಸೇರಿ ಶ್ರೀದುರ್ಗಾಂಬ ದೇವಿಯ ವಾರ್ಷಿಕೋತ್ಸವವನ್ನು ನಡೆಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.

ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ‘ಗ್ರಾಮಸ್ಥರ ಅನುಕೂಲಕ್ಕಾಗಿ ದುರ್ಗಾಂಬ ದೇವಾಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿಸಿಕೊಟ್ಟಿದ್ದು, ದೇವಾಲಯದ ಪ್ರಾಂಗಣಕ್ಕೆ ಟೈಲ್ಸ್ ಅಳವಡಿಸಲು ಸಹಕಾರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ದೇವಾಲಯಕ್ಕೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಲಾಗುವುದು’ ಎಂದು ತಿಳಿಸಿದರು.

ಜಯಪುರ ಗ್ರಾಮದ ಪ್ರತಿ ಮನೆಯಿಂದ ಆರತಿಯನ್ನು ಮೆರವಣಿಗೆ ಮೂಲಕ ದೇವಾಲಯಕ್ಕೆ ತಂದು ದೇವಿಗೆ ಬೆಳಗಿ, ನಾಡಿನ ಒಳಿತಿಗಾಗಿ ಮತ್ತು ಮಳೆ ಬೆಳೆ ಸಮೃದ್ಧಿಯಾಗಿ ಬರಲೆಂದು ಪ್ರಾರ್ಥಿಸಲಾಯಿತು.

ದೇವಾಲಯ ಸಮಿತಿ ಪದಾಧಿಕಾರಿಗಳಾದ ಆರ್.ಮಂಜಣ್ಣ, ಜಿ.ರಾಮಣ್ಣ, ಟಿ.ಎಸ್.ಹೇಮ್ಲನಾಯ್ಕ, ಅಣ್ಣಪ್ಪ, ಸೀನಪ್ಪ, ಈಶ್ವರ್ ನಾಯ್ಕ, ಬಗರ್ ಹುಕುಂ ಸಮಿತಿ ಸದಸ್ಯ ಮೊಹಮ್ಮದ್ ಅಕ್ಬರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-126-938814387

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.