ನರಸಿಂಹರಾಜಪುರ: ‘ನಿರುದ್ಯೋಗಿಗಳು ಸರ್ಕಾರದ ಉದ್ಯೋಗ ಮೇಳದಂತಹ ಕಾರ್ಯಕ್ರಮಗಳ ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಉದ್ಯೋಗ ಅಧಿಕಾರಿ ಕಲಂದರ್ ಖಾನ್ ಹೇಳಿದರು.

ತಾಲ್ಲೂಕಿನ ಮೆಣಸೂರು ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವನಿಧಿ ಯೋಜನೆ ನೊಂದಣಿ, ವೃತ್ತಿ ಮಾರ್ಗದರ್ಶನ, ಸಂಚಾರಿ ಉದ್ಯೋಗ ನೊಂದಣಿ ಅಭಿಯಾನದಲ್ಲಿ ಅವರು ಮಾಹಿತಿ ನೀಡಿದರು.

ಮಾರ್ಚ್ 23ರಂದು ಚಿಕ್ಕಮಗಳೂರಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಂ.ಎನ್.ಸಿ ಸೇರಿದಂತೆ ಹಲವು ಕಂಪನಿಗಳು ಉದ್ಯೋಗ ಪಡೆಯಲು ಇದು ಉತ್ತಮ ವೇದಿಕೆಯಾಗಿದೆ ಎಂದರು. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಉದ್ಯೋಗ ಪಡೆಯಲು ಅವಶ್ಯಕ ಕೌಶಲಗಳ ತರಬೇತಿ ಕಾರ್ಯಕ್ರಮವಾದ ಯುವನಿಧಿ ಪ್ಲಸ್ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ಮಾತನಾಡಿ, ಯುವನಿಧಿ ಯೋಜನೆ ಮೂಲಕ ನಿರುದ್ಯೋಗ ಯುವಕ, ಯುವತಿಯರಿಗೆ ಸರ್ಕಾರದ ಸಹಾಯಧನ ಡಿಬಿಟಿ ಮೂಲಕ ಪಾವತಿ ಮಾಡಲಾಗುತ್ತಿದೆ ಎಂದರು.

ಪ್ರಾಂಶುಪಾಲ ಧನಂಜಯ, ‘ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಂಕಗಳಷ್ಟೇ ಉದ್ಯೋಗಕ್ಕೆ ಮಾನದಂಡವಲ್ಲ. ಪೂರಕವಾಗಿ ಕೌಶಲವೂ ಅಗತ್ಯ. ತರಬೇತಿಗಳ ಸದುಪಯೋಗ ಪಡೆದುಕೊಂಡರೆ ಭವಿಷ್ಯದಲ್ಲಿ ಸಾಧಕರಾಗಬಹುದು’ ಎಂದರು.

ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಇಂದಿರಾನಗರ ರಘು, ನಿತ್ಯಾನಂದ, ಟಿ.ಟಿ. ಇಸ್ಮಾಯಿಲ್, ನಾಗರಾಜ್, ಅಪೂರ್ವ, ಕ್ಷೇತ್ರ ಕುಮಾರ್, ಉದ್ಯೋಗ ಮಾಹಿತಿ ಕೋಶದ ಸಂಚಾಲಕಿ ಪ್ರತಿಶುದಿ, ಕಾಲೇಜಿನ ಯುವನಿಧಿ ಯೋಜನೆ ಸಂಚಾಲಕಿ ಹೇಮಲತಾ, ಐಶ್ವರ್ಯ ಭಾಗವಹಿಸಿದ್ದರು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಉದ್ಯೋಗ ನೋಂದಣಿ ಮಾಡಿಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-126-79934761

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.