ಕಡೂರು: ಎಚ್.ರಾಂಪುರದಿಂದ ಚಿಕ್ಕಂಗಳಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಸ್ಕೂಟರ್ನಿಂದ ಬಿದ್ದು, ತಲೆಗೆ ಪೆಟ್ಟಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಚಂದ್ರಪ್ಪ (60) ಮೃತಪಟ್ಟವರು. ಮನೆಯಿಂದ ಮೊಮ್ಮಕ್ಕಳನ್ನು ಕರೆದುಕೊಂಡು ಸೋಮವಾರ ಸಂಜೆ ಚಿಕ್ಕಂಗಳದ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ, ಸ್ಕೂಟರ್ಗೆ ಗ್ರಾಮದ ಸಮೀಪದ ಜಮೀನಿನ ಬಳಿ ನಾಯಿ ಅಡ್ಡಬಂದ ಪರಿಣಾಮ ಚಂದ್ರಪ್ಪ ಅವರು ರಸ್ತೆ ಮೇಲೆ ಬಿದ್ದಿದ್ದರು.

ತಲೆ, ಕೈ-ಕಾಲಿಗೆ ಪೆಟ್ಟು ಬಿದ್ದ ಗಾಯಾಳುವನ್ನು ಸಂಬಂಧಿಕರು ಕಡೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಸೂಚಿಸಿದ್ದರಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಪರಿಶೀಲಿಸಿದ ವೈದ್ಯರು ಮೆದುಳು ನಿಷ್ಕ್ರಿಯವಾಗಿದ್ದು, ವಾಪಾಸು ಕರೆದುಕೊಂಡು ಹೋಗುವಂತೆ ತಿಳಿಸಿದ್ದರಿಂದ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಸಂಜೆ ಚಂದ್ರಪ್ಪ ಮೃತಪಟ್ಟರು. ಮೃತರ ಪತ್ನಿ ಲೋಲಾಕ್ಷಮ್ಮ ನೀಡಿದ ದೂರಿನ ಅನ್ವಯ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-126-539318153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.