ಚಿಕ್ಕಮಗಳೂರು: ಕೈವಾರ ತಾತಯ್ಯ ಅವರ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ರಾಜಗೋಪುರ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ ಸಗನೀಪುರ ರಸ್ತೆಯ ಕೈವಾರ ಗಿರಿಯಲ್ಲಿ ಏ.28 ಮತ್ತು 29ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರ್ ಆರ್.ಶೆಟ್ಟಿ ತಿಳಿಸಿದರು.

ಏ.28 ರಂದು ಸಂಜೆ 4.30ಕ್ಕೆ ಗಣಪತಿ ಪೂಜೆಯೊಂದಿಗೆ ದೇವಾಲಯ ಪ್ರವೇಶ ಹಾಗೂ ದ್ವಾರಪೂಜೆ, ಸ್ವಸ್ತಿ ಹೋಮ ನಡೆಸಲಾಗುವುದು. ಸಂಜೆ 6 ಗಂಟೆಗೆ ಗಂಗೆ ಪೂಜೆ, ಯಾಗಶಾಲಾ ಪ್ರವೇಶ, ಗುರುವಂದನಾ ಪ್ರಾರ್ಥನೆ ನಡೆಯಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಏ.29 ರಂದು ಬೆಳಿಗ್ಗೆ 5.30ರಿಂದ 7 ಗಂಟೆವರೆಗೆ ಗಂಗೆ ಪೂಜೆ, ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಕೈವಾರದ ಧರ್ಮಾಧಿಕಾರಿ ಎಂ.ಆರ್. ಜಯರಾಮ್ ಅವರು ದೇವಸ್ಥಾನ ಉದ್ಘಾಟನೆ ಮಾಡಲಿದ್ದಾರೆ. ಅವಧೂತ ವಿನಯ್ ಗುರೂಜಿ ಪೂರ್ಣಕುಂಭ ಕಳಶಾಭಿಷೇಕ ನಡೆಸಲಿದ್ದಾರೆ. ಬಸವತತ್ವ ಪೀಠದ ಬಸವ ಮರುಳಸಿದ್ಧ ಸ್ವಾಮೀಜಿ, ಶಂಕರ ದೇವರ ಮಠದ ಚಂದ್ರಶೇಖರ ಶಿವಾಚಾರ್ಯ, ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಭಾಗವಹಿಸಲಿದ್ದು, ಜಿಲ್ಲಾ ಬಲಿಜ ಸಮಾಜದ ಅಧ್ಯಕ್ಷ ಆನಂದ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಲಿಜ ಸಮಾಜದ ಅಧ್ಯಕ್ಷ ಆನಂದ ಶೆಟ್ಟಿ, ತಾಲ್ಲೂಕು ಘಟಕದ ಅಧ್ಯಕ್ಷ ದೇವರಾಜಶೆಟ್ಟಿ, ಮಹೇಶ್ ಬಾಬು, ಯಶವಂತ್, ಪ್ರಸನ್ನ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-126-2102394319

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.