ಚಿಕ್ಕಮಗಳೂರು: ಪಂಚಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಮಂಜೂರು ಮಾಡುವ ಮೂಲಕ ರಾಜ್ಯ ಸರ್ಕಾರ ಜನಪರ ಆಡಳಿತ ನಡೆಸುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಕ್ಷೇತ್ರದ ಕಳಸಾಪುರದಲ್ಲಿ ಬಂಗಾರದ ಮನುಷ್ಯ ಚಿತ್ರೀಕರಣಗೊಂಡಿದ್ದ ರಸ್ತೆಗೆ ₹50 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ಲಕ್ಯಾ ಹೋಬಳಿಯ ಗ್ರಾಮೀಣಾಭಿವೃದ್ಧಿಗೆ ಸುಮಾರು ₹6.15 ಲಕ್ಷ ಕೋಟಿ ಅನುದಾನ ನೀಡಲಾಗಿದ್ದು, 2023-24ನೇ ಸಾಲಿನ ಕಾಮಗಾರಿಗಳು ಮುಕ್ತಾಯ ಹಂತದಲ್ಲಿದ್ದು, ಉಳಿದ ಕಾಮಗಾರಿ ಶೀಘ್ರದಲ್ಲಿಯೇ ಆರಂಭವಾಗಲಿದೆೆ ಎಂದು ಭರವಸೆ ನೀಡಿದರು.

ಬಂಗಾರದ ಮನುಷ್ಯ ಚಿತ್ರದಲ್ಲಿ ನಗುನಗುತಾ ನಲಿ ಎಂದು ಹಾಡಿ ಚಿತ್ರೀಕರಣ ನಡೆಸಿದ ಈ ರಸ್ತೆಯನ್ನು ಅಭಿವೃದ್ಧಿಪಡಿಸಿ, ದೇಶ ಮತ್ತು ರಾಜ್ಯ ಕಂಡ ಅಪ್ರತಿಮ ವರನಟ ರಾಜ್ಕುಮಾರ್ ಅವರ 98ನೇ ಜನ್ಮದಿನೋತ್ಸವದ ಅಂಗವಾಗಿ ರಾಜ್ಕುಮಾರ್ ಅವರ ನಾಮಕರಣ ಮಾಡಿ ಅರ್ಪಣೆ ಮಾಡಲು ಉದ್ದೇಶಿಸಲಾಗಿದೆ ಎಂದರು.

ಸಮಾಜಕ್ಕೆ ಮಾದರಿಯಾಗಿ ಉತ್ತಮ ಸಂದೇಶ ನೀಡುವ ಕಲಾತ್ಮಕ ಚಿತ್ರಗಳಿಗೆ ಆದ್ಯತೆ ನೀಡುತ್ತಿದ್ದ ಡಾರಾಜ್ಕುಮಾರ್ ಅವರು ಬಂಗಾರದ ಮನುಷ್ಯ ಚಿತ್ರದ ಮೂಲಕ ರೈತ ಕುಟುಂಬಕ್ಕೆ ದೊಡ್ಡ ಕೊಡುಗೆ ನೀಡಿ ಭೂಮಿ ನಂಬಿದವರು ಹಾಳಾಗುವುದಿಲ್ಲ ಎಂಬ ನೀತಿಯನ್ನು ಸಾರಿದ್ದಾರೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವರತ್ನ, ಮಾಜಿ ಅಧ್ಯಕ್ಷೆ ರಾಧಮ್ಮ, ಅಚ್ಯುತರಾವ್, ಜಿಪಂ ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಮುಖಂಡರಾದ ಕೆಂಗೇಗೌಡ, ಮರುಳಸಿದ್ಧಪ್ಪ, ವೆಂಕಟೇಶ್, ತಿಮ್ಮೇಗೌಡ, ಹರ್ಷದ್, ನಾಗರಾಜ್, ಶ್ರೀಧರ್, ಅನುಸೂಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-126-1928315790

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.