ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಭಿನ್ನ, ವಿನೂತನ ಕಾರ್ಯಕ್ರಮ ನಡೆಸುವ ಮೂಲಕ ಸಾಹಿತ್ಯ ಆಸಕ್ತರನ್ನು ಪ್ರೇರೇಪಿಸುತ್ತಿದೆ ಎಂದು ಸಂಸ್ಕೃತಿ ಚಿಂತಕ ಹಿರೇಮಗಳೂರು ಪುಟ್ಟಸ್ವಾಮಿ ಹೇಳಿದರು.

ಕಲ್ಯಾಣನಗರದ ಅರಿವಿನ ಮನೆ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನೂತನ ತಾಲ್ಲೂಕು ಘಟಕದ ಅಧ್ಯಕ್ಷರ ಸೇವಾದೀಕ್ಷಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಸಾಪ ತಾಲ್ಲೂಕು ನೂತನ ಅಧ್ಯಕ್ಷ ಎಸ್.ಎಂ.ಲೋಕೇಶಪ್ಪ ಮಾತನಾಡಿ, ‘ಕಸಾಪದಲ್ಲಿ ಸೇವೆ ಸಲ್ಲಿಸುವುದು ಪುಣ್ಯದ ಕೆಲಸ. ಪ್ರಸ್ತುತ ಸಾಹಿತ್ಯ ವೇದಿಕೆ ಅನೇಕ ಸವಲತ್ತು ಒದಗಿಸಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ‘ಕನ್ನಡದ ಕೆಲಸ ಮಾಡುವಲ್ಲಿ ಇತರೆ ಸಂಘ-ಸಂಸ್ಥೆಗಳಿಗಿಂತ ಸಾಹಿತ್ಯ ಪರಿಷತ್ತಿಗೆ ಗೌರವ ಇದೆ’ ಎಂದು ಹೇಳಿದರು.

ನೂತನ ಅಧ್ಯಕ್ಷ ಎಸ್.ಎಂ.ಲೋಕೇಶಪ್ಪ ಅವರಿಗೆ ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ಕಸಬಾ ಹೋಬಳಿ ಅಧ್ಯಕ್ಷೆ ವೀಣಾ ಮಲ್ಲಿಕಾರ್ಜುನ್, ನಗರ ಘಟಕದ ಅಧ್ಯಕ್ಷೆ ರೂಪಾ ನಾಯ್ಕ, ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್, ಗುರುವೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-126-729903532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.