ಆಲ್ದೂರು: ಸಮೀಪದ ಕೆಳಗೂರು ಗ್ರಾಮದಲ್ಲಿರುವ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬೇಸಿಗೆ ಬೆಸುಗೆ ಶಿಬಿರದ ಸಮಾರೋಪ ಶನಿವಾರ ನಡೆಯಿತು.

ತಾಲ್ಲೂಕು ಸಂಪನ್ಮೂಲ ವ್ಯಕ್ತಿ ಚೈತ್ರ ಮಾತನಾಡಿ, ಮಕ್ಕಳಿಗಾಗಿ ಉತ್ತಮ ಕಲಿಕಾ ವೇದಿಕೆಯನ್ನು ಸರ್ಕಾರದ ವತಿಯಿಂದ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಆಲ್ದೂರು ಕಾಂಗ್ರೆಸ್ ಹೋಬಳಿ ಘಟಕದ ಅಧ್ಯಕ್ಷ ಕೆಳಗೂರು ಪೂರ್ಣೇಶ್ ಡಿ.ಆರ್. ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಅನಾವರಣ ಮತ್ತು ವೃದ್ಧಿಗೆ ಬೇಸಿಗೆ ಬೆಸುಗೆ ಶಿಬಿರವು ಅನುಕೂಲಕರವಾಗಿದೆ. ಸರ್ಕಾರ ಆಯೋಜಿಸುವ ಇಂಥ ಕಾರ್ಯಕ್ರಮಗಳಲ್ಲಿ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಬೇಕು. ಪೋಷಕರು ಅವರನ್ನು ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳಲ್ಲಿನ ಕೌಶಲ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಿಕೊಳ್ಳಲು, ವ್ಯಕ್ತಿತ್ವವನ್ನು ಅಭಿವ್ಯಕ್ತಿಗೊಳಿಸಲು ಅತ್ಯುತ್ತಮ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.

ಗ್ರಂಥಪಾಲಕಿ ಧನ್ಯ ಕುಮಾರಿ ಕೆ.ಪಿ. ಮಾತನಾಡಿ, 49 ದಿನಗಳ ಶಿಬಿರ ಇದಾಗಿದ್ದು, ನಾವು 50 ದಿನ ನಡೆಸಿದ್ದೇವೆ. 22 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಪ್ರತಿದಿನವೂ ವಿದ್ಯಾರ್ಥಿಗಳಿಗೆ ವಿಭಿನ್ನ ಕಾರ್ಯಕ್ರಮ ರೂಪಿಸಿದ್ದು, ಸಂಪನ್ಮೂಲ ವ್ಯಕ್ತಿಗಳ ಮೂಲಕ ತರಬೇತಿ ಕಾರ್ಯಾಗಾರ ಆಯೋಜಿಸಿದ್ದೇವೆ. ಆರು ವರ್ಷದಿಂದ 15 ವರ್ಷದವರೆಗಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು ಎಂದು ಮಾಹಿತಿ ನೀಡಿದರು.

ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು.

ಮುಖ್ಯ ಅತಿಥಿ ಕೆಳಗೂರು ಪೂರ್ಣೇಶ್ ಮಕ್ಕಳಿಗೆ ನೀರಿನ ಬಾಟಲಿ ಕೊಡುಗೆಯಾಗಿ ನೀಡಿದರು. ಆರೋಗ್ಯ ಸಹಾಯಕಿ ಲಿಖಿತ, ಪಿಡಿಒ ಧರ್ಮಪ್ಪ, ಕಾರ್ಯದರ್ಶಿ ಪ್ರೇಮ, ಸ್ವಸಹಾಯ ಸಂಘದ ಮೇಲ್ವಿಚಾರಕಿ ಎಂ.ಬಿ.ಕೆ.ರಮ್ಯ, ಪಂಚಾಯಿತಿ ಸಿಬ್ಬಂದಿ, ಪೋಷಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-126-428585418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.