ಚಿಕ್ಕಮಗಳೂರು: ಅತ್ತಿಗುಂಡಿ–ಮಹಲ್ ಮಾರ್ಗದಲ್ಲಿ ಕೆಮ್ಮಣ್ಣುಗುಂಡಿಗೆ ಸಂಪರ್ಕಿಸುವ ನೇರ ರಸ್ತೆ ಅಭಿವೃದ್ಧಿಗೆ ಕಾಲ ಸನ್ನಿಹಿತವಾಗಿದೆ. ₹9.99 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆ ಬಿಡುಗಡೆ ಮಾಡಿದೆ.

ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಝರಿ ಜಲಪಾತ, ಬಾಬಾಬುಡನ್ಗಿರಿ, ಶ್ರೀಗುರು ದತ್ತಾತ್ರೇಯ ಬಾಬಾಬಡನ್ ದರ್ಗಾ, ಮಾಣಿಕ್ಯಧಾರಾ ಜಲಪಾತ, ಗಾಳಿಕೆರೆ, ಕೆಮ್ಮಣ್ಣುಗುಂಡಿ, ಹೆಬ್ಬೆ ಜಲಪಾತ ಸೇರಿ ಎಲ್ಲಾ ಪ್ರವಾಸಿ ತಾಣಗಳು ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿವೆ. ಚಿಕ್ಕಮಗಳೂರು ನಗರದಿಂದ ಬಾಬಾಬುಡನ್ಗಿರಿ ತನಕ ಹೋಗುವ ಪ್ರವಾಸಿಗರು ಕೆಮ್ಮಣ್ಣುಗುಂಡಿ ಮತ್ತು ಹೆಬ್ಬೆ ಜಲಪಾತಕ್ಕೆ ಹೋಗಲು ಮತ್ತೆ ಗಿರಿ ಇಳಿದು ಕೈಮರಕ್ಕೆ ಬಂದು ಲಿಂಗದಹಳ್ಳಿ ಮೂಲಕ ಕೆಮ್ಮಣ್ಣುಗುಂಡಿ ತಲುಪಬೇಕು.

ಬಾಬಾಬುಡನ್ಗಿರಿ ಪ್ರವಾಸ ಹೋದವರು ವಾಪಸ್ ಕೈಮರಕ್ಕೆ ಬಂದು ಲಂಗದಹಳ್ಳಿ ಮಾರ್ಗದಲ್ಲಿ ಕೆಮ್ಮಣ್ಣುಗುಂಡಿ ತಲುಪಲು 87 ಕಿಲೋ ಮೀಟರ್ ಸುತ್ತಾಡಬೇಕು. ಈ ಮಹಲ್ ತಿರುವಿನಿಂದ ಕೇವಲ 14 ಕಿಲೋ ಮೀಟರ್ ದೂರ ಇರುವ ಕೆಮ್ಮಣ್ಣುಗುಂಡಿಗೆ ಸುತ್ತಾಡಿಕೊಂಡು ಸಾಗುವುದು ಈಗ ಅನಿವಾರ್ಯವಾಗಿದೆ. ನೇರ ಸಂಪರ್ಕ ರಸ್ತೆ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಇರುವುದರಿಂದ ಸಾರ್ವಜನಿಕ ವಾಹನಗಳನ್ನು ನಿರ್ಬಂಧಿಸಲಾಗಿದೆ. ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ದ್ವಿಚಕ್ರ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.

ಈ ರಸ್ತೆಯನ್ನು ಅಭಿವೃದ್ಧಿಪಡಿಸಿ ವಾಹನ ಸಂಚಾರಕ್ಕೆ ಅನುವು ಮಾಡಬೇಕು ಎಂದು ಸ್ಥಳೀಯರು ಹಲವು ವರ್ಷಗಳಿಂದ ಒತ್ತಡ ಹೇರಿದ್ದರು. ಇದು ಹೊಸದಾಗಿ ಮಾಡುತ್ತಿರುವ ರಸ್ತೆ ಅಲ್ಲ, ಈ ಹಿಂದೆಯೇ ಇರುವ ರಾಜ್ಯ ಹೆದ್ದಾರಿ ಆಗಿರುವುದರಿಂದ ಅಭಿವೃದ್ಧಿಪಡಿಸಲು ಅವಕಾಶ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದರು. 2025ರ ಜೂನ್ನಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು, ‘ಈ ರಸ್ತೆ ಅಭಿವೃದ್ಧಿಪಡಿಸಿದರೆ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಅನುಕೂಲ ಆಗಲಿದೆ. ಈಗಾಗಲೇ ಚಾಲ್ತಿಯಲ್ಲಿದ್ದ ರಸ್ತೆ ಆಗಿರುವುದರಿಂದ ಅಭಿವೃದ್ಧಿಗೆ ಅಡ್ಡಿಯಿಲ್ಲ’ ಎಂದು ಹೇಳಿದ್ದರು. ’

ಬಳಿಕ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಂದಾಜು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿದ್ದರು. ₹28 ಕೋಟಿ ಮೊತ್ತದ ಯೋಜನೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆಯದೆ ವಾಪಸ್ ಬಂದಿತ್ತು. ಬಳಿಕ ಹಂತ–ಹಂತವಾಗಿ ರಸ್ತೆ ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆ ತೀರ್ಮಾನಿಸಿದ್ದು, ಮೊದಲ ಹಂತದಲ್ಲಿ 6 ಕಿಲೋ ಮೀಟರ್ ರಸ್ತೆ ಅಭಿವೃದ್ಧಿಗೆ ₹9.99 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-126-1910766784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.