ತರೀಕೆರೆ: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ತಾಲ್ಲೂಕಿನ ಕೆಮ್ಮಣ್ಣುಗುಂಡಿಯ ಶ್ರೀಕೃಷ್ಣರಾಜೇಂದ್ರ ಗಿರಿಧಾಮಕ್ಕೆ ಸಾಗುವ ರಸ್ತೆಯು ನಿರ್ವಹಣೆ ಇಲ್ಲದೆ ಹಾಳಾಗಿದ್ದು, ಇಲ್ಲಿಗೆ ಬರುವ ಪ್ರವಾಸಿಗಳು ಜೀವ ಭಯದಲ್ಲೇ ಸಾಗಬೇಕಿದೆ.

ಕೆಲವೇ ದಿನಗಳಲ್ಲಿ ಮಳೆಗಾಲ ಪ್ರಾರಂಭವಾದರೆ ಗುಡ್ಡ ಕುಸಿತವಾಗಿ ಗಿರಿಧಾಮನಕ್ಕೆ ಸಂಪರ್ಕಿಸುವ ರಸ್ತೆ ಬಂದ್ ಆಗುವ ಸಾಧ್ಯತೆಗಳಿವೆ. ಮಳೆಗಾಲ ಆರಂಭವಾಗುವ ಮುನ್ನವೇ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬೇಸಿಗೆ ವೇಳೆ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರು ಪರಿವಾರದೊಂದಿಗೆ ವಿಶ್ರಾಂತಿ ಪಡೆಯುವ ತಾಣ ಇದಾಗಿತ್ತು. ಇದನ್ನು ರಾಜ್ಯ ಸರ್ಕಾರ ಅಭಿವೃದ್ಧಿ ಪಡಿಸಿದೆ. ಕೆಮ್ಮಣ್ಣಗುಂಡಿಯ ಶ್ರೀಕೃಷ್ಣ ರಾಜೇಂದ್ರ ಗಿರಿಧಾಮಕ್ಕೆ ಪ್ರತಿದಿನ ನೂರಾರು ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿರುತ್ತದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಅಂದಿನ ಶಾಸಕ ಡಿ.ಎಸ್.ಸುರೇಶ್ ಅವರ ಬೇಡಿಕೆಯಂತೆ ತರೀಕೆರೆಯ ಶ್ರೀಕೃಷ್ಣ ರಾಜೇಂದ್ರ ಗಿರಿಧಾಮದ ಅಭಿವೃದ್ಧಿಗಾಗಿ ಸುಮಾರು ₹30 ಕೋಟಿ ಅನುದಾನ ಒದಗಿಸಿದ್ದರು. ಇದೇ ಅನುದಾನದಿಂದ ಕೆಮ್ಮಣ್ಣಗುಂಡಿ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿತ್ತು.

ಈ ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ಇಲ್ಲದ ಕಾರಣ ಮಳೆಗಾಲದಲ್ಲಿ ರಸ್ತೆಯ ಮೇಲೆ ಹರಿಯುವ ಮಳೆಯ ನೀರಿನಿಂದ ರಸ್ತೆಯ ಬದಿ ಕುಸಿದಿದೆ. ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಈ ಭಾಗದ ಗ್ರಾಮಸ್ಥರು, ಪ್ರವಾಸಿಗರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ದುರಸ್ತಿ ಕಾರ್ಯ ನಡೆದಿಲ್ಲ. ಇದರಿಂದ ಪ್ರವಾಸಿಗರು ಗಿರಿಧಾಮಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು.

ಬೇಸಿಗೆ ರಜೆ ಕಳೆಯುವ ಸಲುವಾಗಿ ಮಕ್ಕಳೊಂದಿಗೆ ಗಿರಿಧಾಮ ಮತ್ತು ಹೆಬ್ಬೆ ಜಲಪಾತದ ವೀಕ್ಷಣೆಗಾಗಿ ಬಂದಿದ್ದು, ರಸ್ತೆಯ ದುಸ್ಥಿತಿ ನೋಡಿದರೆ ಮತ್ತೊಮ್ಮೆ ಇಲ್ಲಿಗೆ ಬರಲು ಮನಸ್ಸಿಲ್ಲ. ತುರ್ತಾಗಿ ಈ ರಸ್ತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು ಎಂದು ಬೆಂಗಳೂರಿನ ಪ್ರವಾಸಿಗರಾದ ಸಿಂಚನಾ ವೆಂಕಟೇಶ್ ಅವರು ಒತ್ತಾಯಿಸಿದರು.

‘ಶ್ರೀಕೃಷ್ಣ ರಾಜೇಂದ್ರ ಗಿರಿಧಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕೆಲ ಭಾಗ ಕಳೆದ ವರ್ಷದಲ್ಲಿ ಬಿದ್ದ ಮಳೆಯ ಪರಿಣಾಮ ಕೊಚ್ಚಿ ಹೋಗಿದ್ದು, ಈ ರಸ್ತೆಯ ಅಭಿವೃದ್ಧಿಗಾಗಿ ಅಂದಾಜು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಅನುದಾನ ಬಂದ ನಂತರ ರಸ್ತೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು’ ಎಂದು ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ಹಾಲೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ಕೊರಕಲು ಬಿದ್ದ ರಸ್ತೆ; ಅಪಾಯಕ್ಕೆ ಆಹ್ವಾನ

ಈ ರಸ್ತೆಯ ಉದ್ದಕ್ಕೂ ಅನೇಕ ತಿರುವುಗಳಿದ್ದು, ಈ ತಿರುವುಗಳ ಭಾಗದಲ್ಲಿ ಸಾವಿರಾರು ಅಡಿಗಳಷ್ಟಿರುವ ಪ್ರಪಾತಗಳ ಬಳಿ ಮಳೆ ನೀರಿನ ಹರಿವಿನಿಂದ ಅಲ್ಲಲ್ಲಿ ಕೊರಕಲು ಉಂಟಾಗಿದೆ. ರಸ್ತೆ ಕಿರಿದಾದ ಕಾರಣ ಎದುರಿನಿಂದ ಬರುವ ವಾಹನಗಳಿಗೆ ದಾರಿ ನೀಡಲು ವಾಹನ ಚಾಲಕರು ತಮ್ಮ ವಾಹನಗಳನ್ನು ಸ್ವಲ್ಪ ಬದಿಗೆ ಸರಿಸಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಜನ ಪ್ರತಿನಿಧಿಗಳು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಈ ರಸ್ತೆ ದುರಸ್ತಿ ಮಾಡಬೇಕು. ದುರಸ್ತಿಗೆ ಮುಂದಾಗದಿದ್ದರೆ ಮುಂದಾಗುವ ಭಾರಿ ಅನಾಹುತಗಳಿಗೆ ಅವರೇ ಹೊಣೆಗಾರರಾಗಬೇಕಾಗುತ್ತದೆ ಎಂದು ಹೆಬ್ಬೆಸಿರಿ ವಾಹನ ಮಾಲೀಕರ ಸಂಘದ ಪದಾಧಿಕಾರಿಗಳು ಎಚ್ಚರಿಸಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-126-1410349856

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.