ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿನ ಮಾಣಿಕ್ಯಧಾರಾ ಜಲಪಾತದ ಬಳಿ ನಾಪತ್ತೆಯಾಗಿದ್ದ ಕೇರಳದ ವಿದ್ಯಾರ್ಥಿನಿ ಮೃತದೇಹ ಮೂರು ದಿನಗಳ ನಂತರ ಶುಕ್ರವಾರ ಮಧ್ಯಾಹ್ನ ದೊರೆತಿದೆ.

ಜಲಪಾತದ ಸಮೀಪದ ಪ್ರಪಾತದಲ್ಲಿ ಬಾಲಕಿಯ ದೇಹ ಇರುವುದು ಮೊದಲು ಡ್ರೋಣ್ ಕ್ಯಾಮರಾದಲ್ಲಿ ಪತ್ತೆಯಾಯಿತು. ಬಳಿಕ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಅದೇ ಬಾಲಕಿಯ ಮೃತದೇಹ ಎಂಬುದನ್ನು ಖಚಿತಪಡಿಸಿದರು.

ಕಾಲು ಜಾರಿ ಪ್ರಪಾತಕ್ಕೆ ಬಿದ್ದಿರಬಹುದು ಅಥವಾ ಆಕೆಯೇ ಜಿಗಿದಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಕಾರಣಗಳಿದ್ದರೆ ಮರಣೋತ್ತರ ಪರೀಕ್ಷೆ ನಂತರ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಪಾಲಕ್ಕಾಡಿನಿಂದ ಒಂದೇ ಕುಟುಂಬದ 40ಕ್ಕೂ ಹೆಚ್ಚು ಜನ ಪ್ರವಾಸ ಬಂದಿದ್ದರು. ಇದರಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷದ ಬಾಲಕಿಯೂ ಇದ್ದಳು. ಮಂಗಳವಾರ ಸಂಜೆ 5.30ರ ನಂತರ ಬಾಲಕಿ ನಾಪತ್ತೆಯಾಗಿದ್ದಳು. ಪೊಲೀಸರು ಮೂರು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.