ಚಿಕ್ಕಮಗಳೂರು: ಕೊಪ್ಪದಲ್ಲಿ ಪ್ರತ್ಯೇಕ ಆನೆ ಸೆರೆ ತಂಡಕೊಪ್ಪ ಭಾಗದಲ್ಲಿ ಪ್ರತ್ಯೇಕವಾಗಿ ಆನೆ ಸೆರೆ ತಂಡ ಸ್ಥಾಪನೆ ಮಾಡುವ ಬಗ್ಗೆ ಕಾರ್ಯಸಾಧ್ಯತಾ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದರು.

ಅಧಿಕಾರಿಗಳ ಸಭೆ ನಡೆಸಿದ ಅವರು, ‘ಮೂಡಿಗೆರೆ, ಕೊಪ್ಪ ಭಾಗದಲ್ಲಿ ಆನೆ ಹಾವಳಿ ಹೆಚ್ಚಾಗುತ್ತಿದೆ. ಆನೆಗಳನ್ನು ಸೆರೆ ಹಿಡಿದು ಸಾಗಿಸಲು ಪ್ರತ್ಯೇಕ ತಂಡ ರಚನೆ ಮಾಡಲು ಇರುವ ಅವಕಾಶಗಳ ಬಗ್ಗೆ ವರದಿ ಸಲ್ಲಿಸಿ’ ಎಂದರು.

‘ಕೊಪ್ಪದಲ್ಲಿ ರಚನೆಯಾಗಿರುವ ಆನೆ ಕಾರ್ಯಪಡೆ ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂಬದರ ಬಗ್ಗೆಯೂ ವರದಿ ಸಲ್ಲಿಸಿ. ಅರಣ್ಯ ಇಲಾಖೆ ಚಿಕ್ಕಮಗಳೂರು ವೃತ್ತಕ್ಕೆ ₹1 ಕೋಟಿ ಬಿಡುಗಡೆಯಾಗಿದೆ. ಬಾಕಿ ಬೆಳೆಹಾನಿಗೆ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ. ನಿಗ್ರಹ ಕಂದಕ, ಸೌರ ಬೇಲಿಗಳನ್ನು ಸಮರ್ಪಕವಾಗಿ ನಿರ್ವ ಹಣೆ ಮಾಡಬೇಕು’ ಎಂದು ಹೇಳಿದರು.

‘ಕಾಡುಪ್ರಾಣಿಗಳಿಂದ ಬೆಳೆ ಹಾನಿಯ ದೂರು ಬಂದರೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಬೇಕು. ಜಿಪಿಎಸ್ ಚಿತ್ರ ಸಹಿತ ಹಾನಿಯ ನಿರ್ಧಾರ ಮಾಡಿ ಪರಿಹಾರ ನೀಡಬೇಕು. ಆನೆ, ಕಾಡೆಮ್ಮೆ, ಕಾಡುಕೋಣ, ಕಾಡು ಹಂದಿಗಳಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ಪರಿಹಾರ ನೀಡಬೇಕು. ರೈತರಿಗೆ ಅನ್ಯಾಯವಾಗದಂತೆ ಪ್ರಾಮಾಣಿಕವಾಗಿ ಮೌಲ್ಯಮಾಪನ ಮಾಡಬೇಕು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-126-1430316540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.