ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರೋಗ್ಯ ಇಲ್ಲದಿದ್ದರೆ ಎಲ್ಲವೂ ವ್ಯರ್ಥ: ಶಾಸಕ ಟಿ.ಡಿ.ರಾಜೇಗೌಡ

ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆಗೆ ಚಾಲನೆ ನೀಡಿದ ಶಾಸಕ
Published : 2 ಅಕ್ಟೋಬರ್ 2024, 13:50 IST
Last Updated : 2 ಅಕ್ಟೋಬರ್ 2024, 13:50 IST
ಫಾಲೋ ಮಾಡಿ
Comments

ಕೊಪ್ಪ: ‘ಆರೋಗ್ಯ ಇಲ್ಲದಿದ್ದರೆ ಎಷ್ಟೇ ಹಣ, ಐಶ್ವರ್ಯ, ಅಂತಸ್ತು ಇದ್ದರು ಎಲ್ಲವೂ ವ್ಯರ್ಥವಾಗುತ್ತದೆ. ಶಾಲಾ ಮಕ್ಕಳ ಆರೋಗ್ಯ ವೃದ್ಧಿಗಾಗಿ ಅಜೀಮ್ ಪ್ರೇಮ್ ಜಿ ಅವರ ಸಹಕಾರದೊಂದಿಗೆ ರಾಜ್ಯ ಸರ್ಕಾರ ವಾರದ 6ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ವಿತರಿಸುವ ಕಾರ್ಯಕ್ರಮ ರೂಪಿಸಿದೆ’ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ 2024-25ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, ಚಿಕ್ಕಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಜಾತಿ, ಮತ ತಾರತಮ್ಯ ಬಿಟ್ಟು ಓದಿನತ್ತ ಗಮನಕೊಡಬೇಕು. ಸರ್ಕಾರಿ ಸವಲತ್ತು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಚೆನ್ನಾಗಿ ಓದಿ, ತಂದೆ–ತಾಯಿಗೆ ಗೌರವ ತರುವ ಕೆಲಸ ಮಾಡಬೇಕು’ ಎಂದರು.

‘ವಿದ್ಯಾರ್ಥಿಗಳ ಭವಿಷ್ಯ ದೃಷ್ಟಿಯಿಂದ ಸರ್ಕಾರ ಏನೇನು ಕೊಡಲು ಸಾಧ್ಯವಿದೆಯೋ ಅದನ್ನು ಕೊಡುತ್ತಿದೆ. ದೇಶದ ಮಕ್ಕಳಲ್ಲಿ ಅಪೌಷ್ಟಿಕತೆ ಕಾಣುತ್ತಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಮಕ್ಕಳಿಗೆ ಹಾಲು ವಿತರಿಸಲು ಸಿಎಂ ಸಿದ್ದರಾಮಯ್ಯ ಚಾಲನೆ ಕೊಟ್ಟರು. ಇದೀಗ ಅಜಿಮ್ ಪ್ರೇಮ್ ಜಿ ₹1,591 ಕೋಟಿ ವೆಚ್ಚದಲ್ಲಿ ಮೊಟ್ಟೆ, ಚಿಕ್ಕಿ ವಿತರಣೆ ನಡೆಯುತ್ತಿದೆ’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ, ‘ವಿದ್ಯಾರ್ಥಿಗಳ ಮಾನಸಿಕ ಮತ್ತು ಶಾರೀರಿಕ ಬೆಳವಣಿಗೆಗೆ ಸರ್ಕಾರ ಆದ್ಯತೆ ನೀಡಿದೆ’ ಎಂದರು. ವಿದ್ಯಾರ್ಥಿಗಳಿಗೆ ಶೂ ವಿತರಿಸಲಾಯಿತು.

ತಹಶೀಲ್ದಾರ್ ಲಿಖಿತಾ ಮೋಹನ್, ಬಿಇಒ ಜ್ಯೋತಿ, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಕೆ.ಎನ್.ಶಿವಾನಂದ, ಉಪಾಧ್ಯಕ್ಷೆ ಜೀನತ್, ಇ.ಒ ನವೀನ್ ಕುಮಾರ್, ಶಿವಶಂಕರ್, ಅಕ್ರಮ–ಸಕ್ರಮ ಸಮಿತಿ ಸದಸ್ಯರಾದ ಶಂಕರಪ್ಪ, ಅನ್ನಪೂರ್ಣ ನರೇಶ್, ಕೆಡಿಪಿ ಸದಸ್ಯ ರಾಜಶಂಕರ್, ಸಾಧಿಕ್, ನಾರ್ವೆ ಅಶೋಕ್, ಬಿ.ಪಿ.ಚಿಂತನ್, ಪಟ್ಟಣ ಪಂಚಾಯಿತಿ ಸದಸ್ಯ ರಶೀದ್, ವಿಜಯಕುಮಾರ್, ಪ್ರಾಂಶುಪಾಲ ಕಮಲ್ ಬಾಬು ಇದ್ದರು.

ಹೊಸ ಕಟ್ಟಡ ನಿರ್ಮಾಣಕ್ಕೆ ಆದ್ಯತೆ

ಕಾಲೇಜು ಅಭಿವೃದ್ಧಿಗೆ ₹3 ಕೋಟಿಗೂ ಹೆಚ್ಚು ಅನುದಾನ ಕೊಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ. ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುತ್ತಿದ್ದೇನೆ. ಆದರೆ ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆ. ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ಮಳೆಗಾಲ ಮುಗಿದ ಮೇಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಶೇ 33ರಷ್ಟು ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇದನ್ನು ನಿವಾರಿಸಲು ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಅಜೀಮ್ ಪ್ರೇಮ್ ಜಿ ಅವರ ಖಾಸಗಿ ಸಂಸ್ಥೆ ಸರ್ಕಾರದ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತಿದೆ.
-ನವೀನ್ ಕುಮಾರ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT