ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಕ್ಷೇತ್ರದಲ್ಲಿ ನಿವೇಶನ, ವಸತಿ ಸಮಸ್ಯೆ ಪರಿಹಾರಕ್ಕೆ ಒತ್ತಾಯ

ದಲಿತ ಸಂಘರ್ಷ ಸಮಿತಿಯಿಂದ ಶಾಸಕ ಎಚ್.ಡಿ ತಮ್ಮಯ್ಯಗೆ ಮನವಿ
Published 2 ಜೂನ್ 2023, 15:43 IST
Last Updated 2 ಜೂನ್ 2023, 15:43 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕ್ಷೇತ್ರದಲ್ಲಿ ವಸತಿ ನಿವೇಶನ, ಭೂಮಂಜೂರಾತಿ ಸಹಿತ ಹಲವು ಜ್ವಲಂತ ಸಮಸ್ಯೆಗಳಿದ್ದು ಶಾಸಕರು ಪರಿಹರಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಶುಕ್ರವಾರ ಶಾಸಕ ಎಚ್‌.ಡಿ.ತಮ್ಮಯ್ಯಗೆ ಶುಕ್ರವಾರ ಮನವಿ ಸಲ್ಲಿಸಿದರು.

ಮುಖಂಡ ಕೆ.ಸಿ.ವಸಂತಕುಮಾರ್ ಮಾತನಾಡಿ, ಕ್ಷೇತ್ರದಲ್ಲಿ ನೂರಾರು ವಸತಿ, ನಿವೇಶನ, ಭೂರಹಿತರಿದ್ದು ಆದ್ಯತೆ ಮೇರೆ ಸೌಕರ್ಯ ದೊರಕಿಸಿಕೊಡಬೇಕು. ಸರ್ಕಾರಿ ಕಚೇರಿಗಳಲ್ಲಿ ಅರ್ಜಿ ವಿಲೇವಾರಿ ವಿಳಂಬ ತಪ್ಪಿಸಬೇಕು. ಮದ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕೇಂದ್ರದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್ ಅಧ್ಯಯನ ಕೇಂದ್ರ ಸ್ಥಾ‌ಪನೆಗೆ 5 ರಿಂದ 10 ಎಕರೆ ಭೂಮಿ ಮಂಜೂರು ಮಾಡುವಂತೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು. ಈಗ ಜಾಗ ಮಂಜೂರು ಮಾಡಿ ಕಾರ್ಯಗತಗೊಳಿಸಬೇಕು. ಕೊಳಚೆ ನಿರ್ಮೂಲನಾ ಮಂಡಳಿಯಿಂದ ಶಂಕರಪುರ ಮತ್ತು ಬಸವನಹಳ್ಳಿ ಬಡಾವಣೆಗಳಲ್ಲಿ ನಿರ್ಮಿಸುತ್ತಿರುವ ಮನೆಗಳು 4ವರ್ಷ ಕಳೆದರೂ ಪೂರ್ಣಗೊಳಿಸಿಲ್ಲ. ಗುಣಮಟ್ಟದ ತ್ವರಿತ ಕಾಮಗಾರಿಗೆ ಒತ್ತು ನೀಡುವಂತೆ ಮನವಿ ಮಾಡಿದರು.

ರೈತರು ಸಾಕಿದ ದನಕರುಗಳನ್ನು ಸಂತೆಗೆ ಕೊಂಡೊಯ್ಯುವಾಗ ಕೆಲವರು ಅಡ್ಡಗಟ್ಟಿ ವಿಚಾರಣೆ ನೆಪದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಲು ಮುಂದಾಗಿದ್ದಾರೆ. ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೌಡಪ್ಪ, ಸಂಘಟನಾ ಸಂಚಾಲಕರಾದ ದೊಡ್ಡಯ್ಯ, ಜಯರಾಮಯ್ಯ, ಅಣ್ಣಪ್ಪ, ಇಲಿಯಾಜ್ ಅಹಮದ್, ಕೆಂಚಪ್ಪ, ರಮೇಶ್, ಕೃಷ್ಣ, ಧರ್ಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT